ಯಾದಗಿರಿ: ಯೋಗದಲ್ಲಿ ಅಗಾಧವಾದ ಶಕ್ತಿ ಅಡಗಿದೆ. ನಿರಂತರ ಯೋಗಾಭ್ಯಾಸದಿಂದ ಜೀವನದಲ್ಲಿ ರೋಗ ಮುಕ್ತರಾಗಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯೋಗ ದಿನಾಚರಣೆ ಅಂಗವಾಗಿ ಧ್ಯಾನ, ಭಾರತ ಸರ್ಕಾರದ ಮಾರ್ಗಸೂಚಿಯಂತೆ ಯೋಗ ಮಾಡಲಾಯಿತು. ಪತಂಜಲಿ ಯೋಗ ಸಮಿತಿಯ ಅನಿಲ್ ಗುರೂಜಿ ಯೋಗದ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಅಶ್ವಿನಿ ತಂದೆ ಶ್ರೀಧರ ವಿಶೇಷ ಯೋಗ ಪ್ರದರ್ಶನ ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.
ಜಿಲ್ಲಾ ಆಯುಷ್ ಅಧಿಕಾರಿ ಡಾ| ಪ್ರಕಾಶ ಎಚ್.ರಾಜಾಪುರ, ಬಸವ ಯೋಗ ಚಾರಿಟೇಬಲ್ ಟ್ರಸ್ಟ್‌ನ ಸೋಮನಾಥರೆಡ್ಡಿ ಕಣೇಕಲ್, ಪ್ರಜಾಪಿತ ಬ್ರಹ್ಮಕುಮಾರಿ ಮೀರಾ ಅಕ್ಕ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ಡಾ| ರಮೇಶ ಸಜ್ಜನ, ಡಾ| ರಾಜೇಶ್ವರಿ, ಡಾ| ರಾಮರಡ್ಡಿ, ಡಾ| ಸುನಂದಾ, ಡಾ| ಸಂಜಯ ಕುಲಕರ್ಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.