ಚಿತ್ರದುರ್ಗ: ರಾಜ್ಯ ಬಿಜೆಪಿಯಲ್ಲಿ ಇದೀಗ ಸಚಿವ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಇದೀಗ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪರ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಬ್ಯಾಟಿಂಗ್ ನಡೆಸಿದ್ದಾರೆ.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಆಧಾರಿತ ಸಿಎಂ, ಸಚಿವ ಸ್ಥಾನ ನೀಡುವುದು ಸಹಜವಾಗಿದೆ. ಕಳೆದ ಸಲ ಯಾದವ ಸಮುದಾಯಕ್ಕೆ ಮಂತ್ರಿಸ್ಥಾನದ ಭರವಸೆಯನ್ನು ಬಿಎಸ್ ಯಡಿಯೂರಪ್ಪ, ಬಿ.ಎಲ್.ಸಂತೋಷ ನೀಡಿದ್ದರು. ಆದರೆ ಈಡೇರಿಸಲಿಲ್ಲ ಎಂದರು.
ಎಲ್ಲಾ ಸಮುದಾಯಗಳಿಗೂ ಅವಕಾಶ ನೀಡಲಾಗುತ್ತಿದೆ. ಹಿಂದುಳಿದ ಗೊಲ್ಲ ಸಮುದಾಯದ ಪೂರ್ಣಿಮಾಗೆ ಮಂತ್ರಿ ಸ್ಥಾನ ಕೊಡಬೇಕು. ನ್ಯಾಯಬದ್ಧವಾಗಿ ಗೊಲ್ಲ ಸಮುದಾಯದ ಪೂರ್ಣಿಮಾಗೆ ಮಂತ್ರಿಗಿರಿ ಕೇಳುತ್ತಿದ್ದೇವೆ ಎಂದರು.
ಇದನ್ನೂ ಓದಿ:ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?
ಉಪ್ಪಾರ, ಬೆಸ್ತ, ಎಳವ ಸಮಾಜ ಸೇರಿ ಹಿಂದುಳಿದ ಸಮುದಾಯದ ಪ್ರತಿನಿಧಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕೆಲಸ ಮಾಡುತ್ತಿದ್ದಾರೆ. ಲಿಂಗಾಯತರಿಗೆ ಹತ್ತಾರು ಜನಕ್ಕೆ ಮಂತ್ರಿ ಸ್ಥಾನ ಕೊಡುತ್ತಾರೆ. ಒಕ್ಕಲಿಗ, ಕುರುಬ ಸಮುದಾಯಕ್ಕೂ ಹೆಚ್ಚಿನ ಸ್ಥಾನ ನೀಡುತ್ತಾರೆ. ಹಾಗೆಯೇ ಗೊಲ್ಲ ಸಮುದಾಯದ ಏಕೈಕ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಮಂತ್ರಿಗಿರಿ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು