Advertisement

ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧತೆ

12:32 PM Jun 10, 2019 | Naveen |

ಯಾದಗಿರಿ: ರಾಜ್ಯದ ಹಲವೆಡೆ ಬರದ ಪರಿಸ್ಥಿತಿ, ಕುಡಿಯುವ ನೀರು ಇನ್ನಿತರ ಸಮಸ್ಯೆಗಳ ಕುರಿತು ಅವಲೋಕಿಸಿ ಸಮರ್ಪಕ ಸೌಕರ್ಯ ಒದಗಿಸಲು ವಿಫಲವಾದ ಸರ್ಕಾರದ ವಿರುದ್ಧ ಬೃಹತ್‌ ಹೋರಾಟಕ್ಕೆ ಸಿದ್ಧತೆ ನಡೆಸುವುದಾಗಿ ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಯಾದಗಿರಿ ವಿಧಾನಸಭಾ ಕ್ಷೇತ್ರದ ಶಹಾಪುರ ತಾಲೂಕು ಅನವಾರ ಗ್ರಾಮಕ್ಕೆ ಭೇಟಿ ನೀಡಿ ವಾಸ್ತವಿಕ ಪರಿಸ್ಥಿತಿ ವೀಕ್ಷಿಸಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ರಾಜ್ಯದ ಗ್ರಾಮೀಣ ಭಾಗದಲ್ಲಿ ಹಲವಾರು ಸಮಸ್ಯೆ ಜನರನ್ನು ಕಾಡುತ್ತಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಳೆದ ಒಂದು ವರ್ಷದಿಂದ ಬೆಂಗಳೂರಿನ ತಾಜ್‌ವೆಸ್ಟ್‌ ಹೋಟೆಲ್ನಲ್ಲಿ ತಂಗಿದ್ದಾರೆ. ಅವರಿಗೇನು ಗೊತ್ತು ಜನರ ಸಮಸ್ಯೆ. ಈಗ ಸಮಸ್ಯೆಯಿಂದ ಹೊರಬರಲು ಗ್ರಾಮ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ ಎಂದು ವ್ಯಂಗವಾಡಿದರು.

ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಕ್ರಿಯಾಶೀಲವಾಗಿ ಕೆಲಸ ಮಾಡದ ಪರಿಣಾಮ ಆಡಳಿತಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ. ಜನರ ಸಮಸ್ಯೆ ಪರಿಹಾರ ಮಾಡುವರು ಯಾರು? ಅದಕ್ಕಾಗಿ ತಾವು ಪ್ರವಾಸ ಕೈಗೊಂಡಿದ್ದು, ಬರುವ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದರು. ಗ್ರಾಮದಲ್ಲಿ ಬರಗಾಲ ಉದ್ಬವಿಸಿದೆ. ಅಲ್ಲದೆ ನಮ್ಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರ ಜಮಿನುಗಳಿಗೆ ನಾರಾಯಣಪುರ ಎಡದಂಡೆ ಕಾಲುವೆ ನೀರು ತಲುಪುತ್ತಿಲ್ಲ ಪರಿಣಾಮ ರೈತರು ಸಂಕಷ್ಟದಲ್ಲಿದ್ದಾರೆ ಎಂದು ರೈತರು ವಿವರಿಸಿದರು.

ಗ್ರಾಮದಲ್ಲಿ ಸರ್ಕಾರದಿಂದ ಈಗಾಗಲೇ ಶುದ್ಧ ನೀರಿನ ಘಟಕ ಸ್ಥಾಪನೆಯಾಗಿದೆ. ಆದರೆ ಅದು ಕಾರ್ಯರಂಭ ಮಾಡಿಲ್ಲ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಜನರನ್ನು ಕಾಡುತ್ತಿದೆ. ಜತೆಗೆ ಜನತೆ ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಗ್ರಾಮದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ವಿವರಿಸಿದರು.

Advertisement

ನಂತರ ಖಾನಾಪುರಕ್ಕೆ ತೆರಳಿ ಕೆರೆ ವೀಕ್ಷಿಸಿ ಗುಲಸರಂಗೆ ತೆರಳಿ ಕುಡಿಯುವ ನೀರಿನ ಸಮಸ್ಯೆ ಗಮನಿಸಿ ಸ್ಥಳದಲ್ಲಿಯೇ ಇದ್ದ ಜಿಪಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ನನೆಗುದಿಗೆ ಬಿದ್ದಿರುವ ಕುಡಿಯುವ ನೀರು ಪೂರೈಕೆ ಯೋಜನೆಗಳ ಕಾಮಗಾರಿ ಯೋಜನೆಗಳು ಪೂರ್ಣಗೊಳಿಸುವಂತೆ ಸೂಚಿಸಿದರು.

ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಗೋವಿಂದ ಕಾರಜೋಳ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ, ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ಮಾಜಿ ಸಚಿವರಾದ ಡಾ| ಎ.ಬಿ. ಮಾಲಕರೆಡ್ಡಿ, ಬಾಬುರಾವ್‌ ಚಿಂಚಸೂರ, ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ, ನಾಗರತ್ನ ಕುಪ್ಪಿ, ಸಿದ್ಧಣ್ಣಗೌಡ ವಡಗೇರಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next