Advertisement

Yadgiri: ಉಪನ್ಯಾಸಕಿಯ ಅನುಮಾನಾಸ್ಪದ ಸಾವು…ಅಂಕೋಲಾದಲ್ಲಿ ಪ್ರಕರಣ ದಾಖಲು

10:28 PM Apr 18, 2023 | Team Udayavani |

ಅಂಕೋಲಾ: ಯಾದಗಿರಿ ಜಿಲ್ಲೆಯ ಹುಣಸಗಿಯ ಎಸ್. ಕೆ.ಕಾಲೇಜಿನಲ್ಲಿ ಜೀವಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅಂಗಡಿಬೈಲ್ ನ ಯುವತಿ ಮೃತ ಪಟ್ಟಿದ್ದು ಸಾವಿನ ಕುರಿತಂತೆ ಸಂಶಯ ವ್ಯಕ್ತಪಡಿಸಿದ ಯುವತಿಯ ಮನೆಯವರು ಅಂಕೋಲಾ ಪೊಲೀಸ್ ಠಾಣೆಗೆ ಆಗಮಿಸಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.

Advertisement

ಅಂಗಡಿಬೈಲ್ ನಾಕಮನೆ ನಿವಾಸಿ ನಿವೇದಿತಾ ನರಸಿಂಹ ಭಟ್ಟ (24) ಮೃತ ದುರ್ದೈವಿಯಾಗಿದ್ದು ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎಸ್. ಸಿ ಪದವಿ ಬಂಗಾರದ ಪದಕ ವಿಜೇತೆಯಾಗಿದ್ದ ಈಕೆ ಕಳೆದ ಎರಡು ವರ್ಷಗಳಿಂದ ಹುಣಸಗಿಯಲ್ಲಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಳು ಜೂನ್ ತಿಂಗಳಲ್ಲಿ ಐ ಎ ಎಸ್ ಬರೆಯಲು ತಯಾರಿ ನಡೆಸುತ್ತಿದ್ದ ಯುವತಿ ಮೃತ ಪಟ್ಟಿರುವುದಾಗಿ ಮೃತಳ ತಂದೆಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದು ಸುಮಾರು ಹತ್ತಿಪ್ಪತ್ತು ಜನ ಸೇರಿ ಟ್ರಾಕ್ಸ್ ವಾಹನದಲ್ಲಿ ಮೃತ ದೇಹವನ್ನು ಅಂಗಡಿಬೈಲಿಗೆ ತಂದು ಮನೆಯವರಿಗೆ ಒಪ್ಪಿಸಲು ಬಂದ ಸಂದರ್ಭದಲ್ಲಿ ಸಾವಿನ ಕುರಿತಂತೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಮಾತನಾಡುತ್ತಿರುವುದರಿಂದ ಸಂಶಯಗೊಂಡು ಇದೊಂದು ಅಸಹಜ ಸಾವಾಗಿದ್ದು ತನಿಖೆ ನಡೆಸುವಂತೆ ಮೃತಳ ಕುಟುಂಬದವರು ಆಗ್ರಹಿಸಿದ್ದಾರೆ.

ಮೃತದೇಹವನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು ಈ ಕುರಿತು ಹೆಚ್ಚಿನ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Poll: ಸಿಎಂ ಬೊಮ್ಮಾಯಿ ತವರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next