Advertisement

ಯಾದಗಿರಿ: ಆಹಾರ ದಿನಸಿ, ಹಣ್ಣುಗಳು, ತರಕಾರಿ ಕೊಳ್ಳಲು ಅವಕಾಶ

08:50 PM May 21, 2021 | Team Udayavani |

ಯಾದಗಿರಿ: ಜಿಲ್ಲೆಯಾದ್ಯಂತ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳು ಸೇರಿ ಕೆಲ ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ಮೇ 22 ರಂದು ಬೆಳಿಗ್ಗೆ 6 ಗಂಟೆಯಿಂದ 24ರಂದು ಬೆಳಿಗ್ಗೆ 6 ಗಂಟೆವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ. ಆರ್ ಆದೇಶ ಹೊರಡಿಸಿದ್ದಾರೆ.

Advertisement

ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬ್ಯುಲೆನ್ಸ್, ಅಗ್ನಿಶಾಮಕ, ಪೆಟ್ರೋಲ್ ಪಂಪ್, ನೀರು, ನೈರ್ಮಲ್ಯ ಇತರೆ ತುರ್ತು ವೈದ್ಯಕೀಯ ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಉಳಿದಂತೆ ಆಹಾರ ದಿನಸಿ, ಹಣ್ಣುಗಳು ಮತ್ತು ತರಕಾರಿ, ಡೈರಿ ಮತ್ತು ಹಾಲಿನ ಬೂತ್‌ಗಳು, ಮಾಂಸ ಮತ್ತು ಮೀನು, ಪ್ರಾಣಿಗಳ ಮೇವುಗಳೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯ ನ್ಯಾಯಬೆಲೆ ಅಂಗಡಿಗಳು, ಬೆಳಿಗ್ಗೆ 6 ರಿಂದ ಬೆಳಿಗ್ಗೆ 10ರ ವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿರುತ್ತದೆ. ಈ ಎಲ್ಲಾ ಚಟುಚಟಿಕೆಗಳು ಕೋವಿಡ್-19 ರಾಷ್ಟ್ರೀಯ ನಿರ್ದೇಶನಗಳ ಷರತ್ತುಗಳ ಅನ್ವಯ ಕಾರ್ಯನಿರ್ವಹಿಸಲಿವೆ.

ಇದನ್ನೂ ಓದಿ :ಪರೀಕ್ಷೆ ವಿಳಂಬವಾದರೂ ಆನ್‌ಲೈನ್‌ ಬೋಧನೆ ಮುಂದುವರಿಕೆ : ಡಿಸಿಎಂ ಅಶ್ವತ್ಥನಾರಾಯಣ

ಉಳಿದ ಎಲ್ಲಾ ಚಟುವಟಿಕೆಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ-2004ರ 34(ಎಂ) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿರ್ಬಂಧಿಸಿ ಆದೇಶವನ್ನು ಹೊರಡಿಸಿದ್ದಾರೆ.

Advertisement

ಸಾರ್ವಜನಿಕ ಅಥವಾ ಖಾಸಗಿ ಬಸ್‌ಗಳ ಅಥವಾ ಪ್ರಮಾಣಿಕರ ವಾಹನಗಳ ಯಾವುದೇ ಸಂಚಾರ ಇರುವುದಿಲ್ಲ. ಮೇ.22 ರ ಬೆಳಿಗ್ಗೆ 6ರಿಂದ 24ರ ವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಭಾರತ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 133,144(3)ರ ಪ್ರಕಾರ ಹಾಗೂ ದಿ ಎಡಿಡೆಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಶನ್ಸ್-2020ರ ನಿಯಮ 12ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸುತ್ತಾ ಯಾದಗಿರಿ ಜಿಲ್ಲೆಯಾದ್ಯಂತ 04 ಜನಕ್ಕಿಂತ ಹೆಚ್ಚಿನ ಜನ ಸೇರದಂತೆ ಜಿಲ್ಲೆಯಾದ್ಯಂತ ಭಾರತ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ಅನ್ನು ಜಾರಿಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next