Advertisement

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

12:17 PM Sep 24, 2024 | Team Udayavani |

ಯಾದಗಿರಿ: ಸೋಮವಾರ(ಸೆ. 23) ಸಿಡಿಲು ಬಡಿದು ನಾಲ್ವರು ಮೃತಪಟ್ಟದ್ದರು ಇಂದು ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ತಾಂಡಾಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Advertisement

ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.

ಸಿಡಿಲು ಬಡಿದು ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ಹೇಳಿದರು.

ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ ಸುರೇಶ ಅಂಕಲಗಿ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ: MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Advertisement

Udayavani is now on Telegram. Click here to join our channel and stay updated with the latest news.

Next