Advertisement

ಇಂದು ನಾಲ್ಕು ಕಡೆ ಸಿಎಂ ಪ್ರಚಾರ ಸಭೆ

07:51 PM Apr 12, 2021 | Team Udayavani |

ಬಸವಕಲ್ಯಾಣ : ಕಾಂಗ್ರೆಸ್‌ ಸ್ವಂತ ಬಲದ ಮೇಲೆ ಗೆಲ್ಲಲಿಕ್ಕಾಗುವುದಿಲ್ಲ ಎಂದು ತಿಳಿದುಕೊಂಡು ಪಕ್ಷೇತರ ಅಭ್ಯರ್ಥಿ ನಿಲ್ಲಿಸಿ ತನು-ಮನದಿಂದ ಸಹಾಯ ಮಾಡುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟೀಕಿಸಿದರು. ಕ್ಷೇತ್ರದ ಮುಡಬಿಯಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಡೆಸುವ ಚುನಾವಣಾ ಪ್ರಚಾರದ ಬಹಿರಂಗ ಸಭೆಯ ಸಿದ್ಧತೆ ಅವಲೋಕಿಸಿ ಅವರು ಮಾತನಾಡಿದರು.

Advertisement

ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ನಾಲ್ಕು ಕಡೆ ಬಹಿರಂಗ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿ ಅಭ್ಯರ್ಥಿ ಶರಣು ಸಲಗರ ಪರ ಮತಯಾಚಿಸುವರು. ಬಿಜೆಪಿ ಸರ್ವ ವರ್ಗದವರ ಮತ ಪಡೆಯಲಿದ್ದು, ಕ್ಷೇತ್ರದ ಮಾಜಿ ಶಾಸಕ ಹಾಗೂ ಪಕ್ಷೇತರ ಅಭ್ಯರ್ಥಿ ಕಾಂಗ್ರೆಸ್‌ ನ ಬಿ ಟೀಮ್‌ವಾಗಿದೆ. ಪಕ್ಷೇತರ ಅಭ್ಯರ್ಥಿಗೆ ಮತ ಹಾಕಿದರೆ ಕಾಂಗ್ರೆಸ್‌ ಗೆ ಹಾಕಿದಂತೆ ಎಂಬುದನ್ನು ಜನರು ತಿಳಿದುಕೊಂಡಿದ್ದಾರೆ.

ಬಸವಕಲ್ಯಾಣ ಸಮಗ್ರ ಅಭಿವೃದ್ಧಿಯಾಗಬೇಕೆಂದರೆ ಬಿಜೆಪಿಗೆ ಮತ ಎಂಬುದನ್ನು ಸರ್ವ ವರ್ಗದ ಮತದಾರರು ನಿಶ್ಚಯಿಸಿದ್ದಾರೆ. ಹೀಗಾಗಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಸವಕಲ್ಯಾಣ ಅಭಿವೃದ್ಧಿ ಎಂಬುದು ನಿಂತ ನೀರಾಗಿದೆ. ಬಿಜೆಪಿ ಗೆದ್ದ ನಂತರ ಅಭಿವೃದ್ಧಿ ಪರ್ವ ಶುರುವಾಗಲಿದೆ. ಅನುಭವ ಮಂಟಪಕ್ಕೆ ಅಡಿಗಲ್ಲು ಹಾಕಿರುವುದು ಅಭಿವೃದ್ಧಿ ವೇಗಕ್ಕೆ ದಿಕ್ಸೂಚಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಭಗವಂತ ಖೂಬಾ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್‌ ನರಿಬೋಳ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಜಿಪಂ ಮಾಜಿ ಸದಸ್ಯ ಚಂದ್ರಶೇಖರ ಪಾಟೀಲ್‌, ಮುಖಂಡ ಸಿದ್ದು ಪಾಟೀಲ್‌, ರೇವಣಸಿದ್ದಪ್ಪ ಸಂಕಾಲಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next