Advertisement

ಯುಎಇ ಕನ್ನಡ ರತ್ನ ಪ್ರಶಸ್ತಿ ನಿರಾಕರಿಸಿದ ಯದುವೀರ್‌

10:08 PM Nov 12, 2022 | Team Udayavani |

ಮೈಸೂರು: ಯುಎಇ ಕನ್ನಡ ರತ್ನ ಪ್ರಶಸ್ತಿಯನ್ನು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಿರಾಕರಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ  ಅವರು, ನನಗೆ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂಬ ಸುದ್ದಿ ಮುದ್ರಣ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಪ್ರಶಸ್ತಿಯನ್ನು ತಾನು ಸ್ವೀಕರಿಸುವುದಿಲ್ಲ.

ಪ್ರಶಸ್ತಿಗೆ ತನ್ನನ್ನು ಪರಿಗಣಿಸಿದ್ದಕ್ಕಾಗಿ ಸಂಘಟಕರಿಗೆ ಧನ್ಯವಾದ ತಿಳಿಸುತ್ತೇನೆ. ಆದರೆ ಈ ಪ್ರಶಸ್ತಿಯನ್ನು ಸ್ವೀಕರಿಸುವುದು ಸೂಕ್ತವೆಂದು ತಾನು ಭಾವಿಸುವುದಿಲ್ಲ ಎಂದಿದ್ದಾರೆ. ನಮ್ಮ ರಾಜ್ಯ ಮತ್ತು ನಮ್ಮ ಕನ್ನಡ ಸಮುದಾಯದ ಕಲ್ಯಾಣಕ್ಕಾಗಿ ಯಾವಾಗಲೂ ಶ್ರಮಿಸುತ್ತೇನೆ. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದೇನೆ. ಯುಎಇಯಲ್ಲಿರುವ ನಮ್ಮ ಕನ್ನಡ ಸಮುದಾಯವನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆಂದು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next