Advertisement

ಯದುವೀರ್‌ಗೆ ಬಿಜೆಪಿ ಗಾಳ?

06:15 AM Mar 15, 2018 | Team Udayavani |

ಮೈಸೂರು: ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಸ್ಥಳೀಯವಾಗಿ ಮತದಾರರನ್ನು ಸೆಳೆಯಲು ಪ್ರಭಾವಿ ನಾಯಕನ ಹುಡುಕಾಟದಲ್ಲಿರುವ ಬಿಜೆಪಿ ನಾಯಕರು, ಮೈಸೂರು ರಾಜವಂಶಸ್ಥರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಗಾಳ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಕಳೆದ ಒಂದು ವರ್ಷದಿಂದಲೂ ಇಂತಹದೊಂದು ಪ್ರಯತ್ನ ನಡೆದಿದ್ದು, ಸ್ವತಃ ಯದುವೀರ್‌ ಅವರೇ ಸದ್ಯಕ್ಕೆ ರಾಜಕೀಯ ಪ್ರವೇಶಿಸುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಗೆಲುವಿನ ದೃಷ್ಟಿಯಿಂದ ಯದುವೀರ್‌ ಅವರನ್ನು ಅಭ್ಯರ್ಥಿಯಾಗಿಸುವ ಮೂಲಕ ಈ ಭಾಗದಲ್ಲಿ ಮೈಸೂರು ರಾಜಮನೆತನದ ಬಗೆಗೆ ಇರುವ ಭಾವನಾತ್ಮಕ, ಪೂಜ್ಯ ಭಾವನೆಯನ್ನು ಮತವಾಗಿ ಪರಿವರ್ತಿಸಿಕೊಳ್ಳಬಹುದು ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ.

ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವುದರಿಂದ ಯದುವೀರ್‌ ಅವರನ್ನು ಈಗಲೇ ಪಕ್ಷಕ್ಕೆ ಕರೆತರುವುದರಿಂದ ವಿಧಾನಸಭೆ ಚುನಾವಣೆಯಲ್ಲೂ ಅನುಕೂಲವಾಗಲಿದೆ ಎಂಬ ಕಾರಣದಿಂದ ವಿಧಾನಸಭೆ ಚುನಾವಣೆಗೂ ಮುನ್ನ ಯದುವೀರ್‌ ಅವರನ್ನು ಪಕ್ಷಕ್ಕೆ ಸೆಳೆಯಲು, ಅವರ ಪತ್ನಿ ತ್ರಿಷಿಕಾಕುಮಾರಿ ಅವರ ತವರು ರಾಜಸ್ಥಾನದ ಡುಂಗರ್‌ಪುರ್‌ ರಾಜಮನೆತನದ ಮೇಲೆ ಬಿಜೆಪಿ ರಾಷ್ಟ್ರೀಯ ನಾಯಕರು ಒತ್ತಡ ಹೇರಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next