Advertisement

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

01:37 PM Jun 13, 2024 | Team Udayavani |

ಮೈಸೂರು: ಮೈಸೂರು ಅಭಿವೃದ್ಧಿ ಮಾಡಲು ಎಲ್ಲರ ಸಹಕಾರ ಅತಿ ಅಗತ್ಯ ಎಂದು ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

Advertisement

ಸಂಸದರಾದ ಬಳಿಕ ಮೈಸೂರಿನಲ್ಲಿ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಒಡೆಯರ್ ಮೈಸೂರು ಕೊಡಗು ಕ್ಷೇತ್ರದ ಮತದಾರರಿಗೆ ಧನ್ಯವಾದವನ್ನು ತಿಳಿಸಿದ ಅವರು ಮೈಸೂರು ಕೊಡಗು ಕ್ಷೇತ್ರದಲ್ಲಿ 14ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ. ಮೈಸೂರು ಕೊಡಗು ಕ್ಷೇತ್ರದ ಜನತೆ ನಮಗೆ ಉತ್ತಮ ಬೆಂಬಲ ನೀಡಿದ್ದು ಜೊತೆಗೆ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಜನತೆ ಅವಕಾಶ ಮಾಡಿಕೊಟ್ಟಿದ್ದಾರೆ ಇದರೊಂದಿಗೆ ರಾಜ್ಯದ ಐವರಿಗೆ ಕೇಂದ್ರ ಸಚಿವ ಸ್ಥಾನವೂ ಸಿಕ್ಕಿದೆ ಅಭಿವೃದ್ಧಿಗೆ ಇದು ಸಹಕಾರ ಆಗುತ್ತದೆ ಹಾಗಾಗಿ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಬರಲು ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

ಮೈಸೂರಿನ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ. ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ, ಪ್ರತಾಪ್ ಸಿಂಹ ರ ಸಹಕಾರವನ್ನು ಕೇಳುತ್ತೇನೆ. ಮುಂದಿನ ದಿನಗಳಲ್ಲಿ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ. ಮೈಸೂರು ಪ್ರವಾಸಿ ತಾಣವಾಗಿರುವ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮೈಸೂರು ಪಾರಂಪರಿಕ ಕಟ್ಟಡಗಳ ನಗರವಾಗಿದೆ. ಹಾಗಾಗಿ ದೇವರಾಜ, ಲ್ಯಾನ್ಸ್ ಡೌನ್ ಕಟ್ಟಡಗಳನ್ನ ನೆಲಸಮ ಮಾಡುವ ಅವಶ್ಯಕತೆ ಇಲ್ಲ. ಹಾಗೆಯೆ ಅದನ್ನ ಸಂರಕ್ಷಣೆ ಮಾಡುತ್ತೇವೆ. ಇದರ ಜೊತೆಗೆ ಮೈಸೂರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಕೈಗಾರಿಕೆಗಳ ಅಭಿವೃದ್ಧಿಯನ್ನೂ ಮಾಡುತ್ತೇವೆ ಎಂದು ಹೇಳಿದರು.

ಈಗಾಗಲೇ ಕುವೆಂಪುನಗರದಲ್ಲಿ ನನ್ನ ಕಚೇರಿ ತೆರೆಯಲಾಗಿದ್ದು ಸಾರ್ವಜನಿಕರು ಕ್ಷೇತ್ರದಲ್ಲಿರುವ ಸಮಸ್ಯೆಗಳ ಕುರಿತು ಮಾತನಾಡಲು ನನ್ನ ಅಧಿಕೃತ ಕಚೇರಿಗೆ ಬಂದು ನನ್ನನ್ನು ಭೇಟಿ ಮಾಡಬಹುದು ಎಂದು ಹೇಳಿದರು.

Advertisement

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿವ ವಿಚಾರವಾಗಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು.. ಹಾಗಾಗಿ ಗ್ಯಾರಂಟಿ ಯೋಜನೆ ಮುಂದುವರೆಸುವುದು ಸೂಕ್ತ. ಆದರೆ ಮುಂದುವರೆಸಬೇಕೋ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

ಇದನ್ನೂ ಓದಿ: ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

Advertisement

Udayavani is now on Telegram. Click here to join our channel and stay updated with the latest news.

Next