Advertisement

Pratap Simha ಅವರಿಗಿಂತಲೂ ಯದುವೀರ್‌ ಉತ್ತಮ ಅಭ್ಯರ್ಥಿ: ರಾಧಾಮೋಹನ್‌ ದಾಸ್‌

09:43 PM Mar 24, 2024 | Team Udayavani |

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್‌ ಸಿಂಹ ಅವರಿಗಿಂತಲೂ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣ ಉಸ್ತುವಾರಿ ರಾಧಾಮೋಹನ್‌ ದಾಸ್‌ ಅಗರವಾಲ್‌ ಹೇಳಿದರು.

Advertisement

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಅರಸರು ತಮ್ಮ ಅಳ್ವಿಕೆಯ ಅವಧಿಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಅರಸರ ದೂರದೃಷ್ಟಿಯ ಫ‌ಲವಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಮೈಸೂರಿನ ಮಹಾರಾಜರು ಮೇಲ್ಪಂಕ್ತಿ ಹಾಕಿಕೊಟ್ಟಿದ್ದು, ಇದೆಲ್ಲವನ್ನೂ ಪರಿಗಣಿಸಿ ರಾಜಮನೆತನದ ಯದುವೀರ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದ್ದೇವೆ ಎಂದು ಹೇಳುವ ಮೂಲಕ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ತಪ್ಪಿರುವುದಕ್ಕೆ ಕಾರಣವೇನೆಂಬುದನ್ನು ಬಹಿರಂಗಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next