Advertisement
ಮಳೆ ಕೊರತೆಯಿದೆ: ಇತ್ತೀಚಿನ ವರ್ಷಗಳಲ್ಲಿ ಬಯಲು ಸೀಮೆಯಂತೆ ಮಲೆನಾಡು ಪ್ರದೇಶ ಗಳಲ್ಲೂ ಹಳ್ಳ, ಝರಿಗಳು ಭತ್ತಿಹೋಗಿದ್ದು ಅಲ್ಲಿಯೂ ಕುಡಿವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ನಾಶದಿಂದಾಗಿ ಪರಿಸರದಲ್ಲಿ ಏರುಪೇರಾಗಿ ಮಳೆ ಕೊರತೆ ಎದುರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
Related Articles
Advertisement
ಖಾಸಗಿ ಕೊಳವೆ ಬಾವಿ ನೀರು ಪೂರೈಕೆ : ಹಳ್ಳಿಗಳಲ್ಲಿ ಕುಡಿವ ನೀರಿನ ಸಮಸ್ಯೆ ಆಗದಂತೆ ನಿಗಾವಹಿಸಲಾಗಿದೆ. 37 ಗ್ರಾಪಂಗಳಲ್ಲಿ ಪ್ರಸ್ತುತ ಎಲ್ಲೂ ತೀವ್ರತರವಾದ ನೀರಿನ ಸಮಸ್ಯೆ ಎದುರಾಗಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಆಗಲಿರುವ ಹಳ್ಳಿಗಳನ್ನು ಗುರುತಿಸಲಾಗಿದ್ದು ಸಮಸ್ಯೆ ಎದುರಾಗದಂತೆ ಕ್ರಮವಹಿಸಲಾಗಿದೆ ಎಂದು ಜಿಪಂ ಸಹಾಯಕಕಾರ್ಯಪಾಲಕ ಎಂಜಿನಿಯರ್ ರಂಜಿತಾ ತಿಳಿಸಿದರು.
ಜಿಲ್ಲಾಧಿಕಾರಿಗಳು ಕುಡಿವ ನೀರಿಗೆ ಸಮಸ್ಯೆಯಾಗಂತೆ ಕ್ರಮ ಕೈಗೊಳ್ಳಿ ಎಂದು ಆದೇಶ ನೀಡಿದ್ದಾರೆ. ಸಮಸ್ಯೆ ಇರುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.ತಾಲೂಕಿನ ಯಾವುದೇ ಹಳ್ಳಿಗಳಲ್ಲಿ ತೀವ್ರತರವಾದ ಕುಡಿವ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಕುಡಿವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆಯಾಗಿ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನ ಅರೇಹಳ್ಳಿಯ ಕೆಲ ಭಾಗಗಳಲ್ಲಿ ಸಮಸ್ಯೆ ಎದುರಾಗಲಿದ್ದು ನೀರಿನ ತೊಂದರೆ ಆಗದಂತೆ ಖಾಸಗಿಯವರ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲು ಎಲ್ಲಾ ತಯಾರಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ನೀರಿನ ಯೋಜನೆ ಸಾಧ್ಯವಾಗಿಲ್ಲ :
ಬೇಲೂರು ತಾಲೂಕು ಮಲೆನಾಡು ಅರೆಮಲೆನಾಡು ಬಯಲು ಸೀಮೆ ಪ್ರದೇಶಗಳನ್ನು ಹೊಂದಿದ್ದು ತಾಲೂಕಿನಲ್ಲಿ ಯಗಚಿ ಮತ್ತುವಾಟೇಹೊಳೆ ಜಲಾಶಯಗಳಿವೆ. ಹೀಗಿದ್ದರೂ ತಾಲೂಕಿಗೆ ಸಂಪೂರ್ಣ ಕುಡಿವ ನೀರು ಕಲ್ಪಿಸಲು ಅಧಿಕಾರ ಅನುಭವಿಸಿದ ಶಾಸಕರು, ರಾಜಕೀಯ ಪಕ್ಷಗಳ ಮುಖಂಡರ ಇಚ್ಚಾಶಕ್ತಿ ಕೊರತೆ, ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಲ್ಲದೇ ಯಗಚಿ ಜಲಾಶಯದಿಂದ ಚಿಕ್ಕಮಗಳೂರು, ಅರಸಿಕೆರೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ತಾಲೂಕಿ ನಲ್ಲೇ ಇರುವ ಜಲಾಶಯಗಳಿಂದತಾಲೂಕಿಗೆ ಕುಡಿಯುವ ನೀರಿನ ಯೋಜನೆ ಕಲ್ಪಿಸಲು ಮಾತ್ರ ಇದುವರೆಗೂ ಸಾಧ್ಯವಾಗಿಲ್ಲ.
– ಡಿ.ಬಿ.ಮೋಹನ್ ಕುಮಾರ್