ಅರಸೀಕೆರೆ: ರಾಜ್ಯದ ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ ತಾಲೂಕಿನ ಸುಕ್ಷೇತ್ರ ಯಾದಾಪುರದ ಜೇನುಕಲ್ ಸಿದ್ದೇಶ್ವರ ಸ್ವಾಮಿಯ ಸನ್ನಿಧಾನಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಈ ಭಾಗದ ಗ್ರಾಮಗಳ ಜನತೆಗೆ ಯಗಚಿ ನದಿ ಮೂಲದಿಂದ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಯನ್ನ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.
ತಾಲೂಕಿನ ಸುಕ್ಷೇತ್ರರ ಯಾದಾಪುರ ಗ್ರಾಮ ವ್ಯಾಪ್ತಿಯಲ್ಲಿ ಮತ್ತು ಕಾಲೋನಿ ಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು. 258 ಕೋಟಿ ರೂ. ವೆಚ್ಚದಲ್ಲಿ ಬಹು ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಮೂಲಕ ತಾಲೂಕಿನ 521 ಗ್ರಾಮಗಳಿಗೆ ಹೇಮಾವತಿ ನದಿ ಮೂಲ ದಿಂದ ನೀರು ಪೂರೈಸುವ ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದರು.
3.50 ಕೋಟಿ ವಿಶೇಷ ಅನುದಾನ: ಬೇಲೂರು ಯಗಚಿ ನದಿ ಮೂಲದಿಂದ ಯಾದಾಪುರ ಸೇರಿದಂತೆ ಈ ಭಾಗದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿಗೆ ಸರಕಾರದಿಂದ 3.50 ಕೋಟಿ ರೂ. ವಿಶೇಷ ಅನುದಾನವನ್ನ ತಂದಿದ್ದು, ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗು ವುದೆಂದು ಭರವಸೆ ನೀಡಿದರು.
ಮುಜರಾಯಿ ದೇಗುಲಗಳ ಅಭಿವೃದ್ಧಿ: ಯಾದಾಪುರ ಜೇನುಕಲ್ ಸಿದ್ದೇಶ್ವರ ಸ್ವಾಮಿ ಕ್ಷೇತ್ರ ಸೇರಿದಂತೆ ತಾಲೂಕಿನ ಸುಕ್ಷೇತ್ರಗಳಾದ ಅಮರಗಿರಿ ಮಾಲೇ ಕಲ್ ತಿರುಪತಿಯ ಲಕ್ಷ್ಮೀ ವೆಂಕಟರ ಮಣಸ್ವಾಮಿ ದೇವಾಲಯ, ಬಿಳಿಕಲ್ ರಂಗನಾಥಸ್ವಾಮಿ ದೇವಾಲಯ, ಬೆಟ್ಟದಪುರದ ರಂಗನಾಥಸ್ವಾಮಿ ದೇವಾ ಲಯ ಸೇರಿದಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕ್ಷೇತ್ರದ ವಿವಿಧ ದೇವಾಲಯಗಳ ಅಭಿವೃದ್ಧ್ದಿಗೆ ಒತ್ತು ನೀಡಿ ನೂರಾರು ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡ ಲಾಗುತ್ತಿದೆ. ಈ ಸಂಬಂಧ ಕೆಲವು ಕ್ಷೇತ್ರ ಗಳಲ್ಲಿ ಅಭಿವೃದ್ಧ್ದಿ ಕಾಮಗಾರಿಗಳು ಪೂರ್ಣಗೊಂಡಿದ್ದರೆ ಮತ್ತೆ ಕೆಲವು ಕ್ಷೇತ್ರ ಗಳಲ್ಲಿ ಜೀರ್ಣೋದ್ಧಾರ ಕಾಮಗಾರಿಗಳು ನಡೆಯುತ್ತಿದೆ ಎಂದು ಹೇಳಿದರು.
ಆದರ್ಶ ರಾಜಕಾರಣಿ: ಗೀಜಿಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಧರ್ಮಶೇಖರ್ ಮಾತನಾಡಿ, ದೇವಾಲಯಗಳ ಜೀರ್ಣೋದ್ಧಾರ, ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ, ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿ ಹಾರ, ನಗರದಂತೆ ಗ್ರಾಮೀಣ ಭಾಗದ ಜನತೆಗೆ ಮೂಲಭೂತ ಸೌಕರ್ಯ ಗಳನ್ನು ಒದಗಿಸುತ್ತಾ ಸರಕಾರದ ವಿವಿಧ ಯೋಜನೆಗಳಲ್ಲಿ ದೊರೆಯುವ ಅನು ದಾನವನ್ನು ಕ್ಷೇತ್ರಕ್ಕೆ ತಂದು ಅರಸೀಕೆರೆ ಕ್ಷೇತ್ರವನ್ನ ಅಭಿವೃದ್ಧಿ ಪಥದಲ್ಲಿ ಕೊಂಡೊ ಯ್ಯುತ್ತಿರುವ ಶಾಸಕರ ಅಭಿವೃದ್ಧಿ ಚಿಂತನೆಗಳು ನಮ್ಮಂತ ಯುವ ರಾಜಕಾರಣಿಗಳಿಗೆ ಆದರ್ಶವಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಗೀಜಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು, ಮುರುಂಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜವನಪ್ಪ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಮುರುಂಡಿ ಶಿವಯ್ಯ ಜೆಡಿಎಸ್ ಮುಖಂಡರಾದ ನಾರಾಯಣಮೂರ್ತಿ ಗಿರಿಯಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕರಿಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.