Advertisement
ಸಾಹಿತ್ಯ ಸಮ್ಮೇಳನಕ್ಕೆ ಸರಿ ಸಮಾನ ಸಿದ್ಧತೆ ಹಾಗೂ ಗುಣಮಟ್ಟದೊಂದಿಗೆ ಸಮಗ್ರ ಯಕ್ಷಗಾನ ಸಾಹಿತ್ಯ ಸಮ್ಮೇಳನ ನಡಸಲು ನಿರ್ಧರಿಸಲಾಗಿದೆ. ಸಚಿವ ವಿ. ಸುನಿಲ್ ಕುಮಾರ್ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್ ಹೆಗಡೆ ನೇತೃತ್ವದಲ್ಲಿ ಸೋಮವಾರ ಈ ಸಂಬಂಧ ಮಹತ್ವದ ಸಭೆ ನಡೆಸಲಾಗಿದ್ದು, ಫೆಬ್ರವರಿ 11 ಹಾಗೂ 12 ರಂದು ಉಡುಪಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
Related Articles
ಸಮ್ಮೇಳನದ ಭಾಗವಾಗಿ ”ನಿಮ್ಮ ಮುಖಕ್ಕೆ ಬಣ್ಣ ಬೇಕೇ” ಎಂಬ ವರ್ಣ ವೈಭವ ಆಯೋಜಿಸಲಾಗಿದೆ. ಆಸಕ್ತರಿಗೆ ತೆಂಕು- ಬಡಗು ಶೈಲಿಯಲ್ಲಿ ಬಣ್ಣ ಹಚ್ಚಿ ವೇಷ ಕಟ್ಟಲಾಗುತ್ತದೆ. ಒಟ್ಟಾರೆಯಾಗಿ ಒಂದು ಸಾಹಿತ್ಯ ಸಮ್ಮೇಳನದಲ್ಲಿ ಯಾವ ಅಂಶಗಳು ಅಡಕವಾಗುತ್ತದೆಯೋ ಅವೆಲ್ಲವೂ ಯಕ್ಷ ಸಾಹಿತ್ಯ ಸಮ್ಮೇಳನದಲ್ಲಿ ಕಾಣಸಿಗುತ್ತದೆ.
Advertisement
ಕೋವಿಡ್ ಕಾಲ ಘಟ್ಟದ ಬಳಿಕ ಯಕ್ಷಗಾನ ಪ್ರದರ್ಶನ ಹಾಗೂ ತಿರುಗಾಟದಲ್ಲಿ ಮಹತ್ವದ ಬದಲಾವಣೆಯಾಗುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯೇ ಸ್ವಯಂ ಪ್ರೇರಣೆಯಿಂದ ಇಂಥದೊಂದು ಸಮ್ಮೇಳನದ ಆಯೋಜನೆಗೆ ಮುಂದಾಗಿರುವುದು ಯಕ್ಷಗಾನಪ್ರಿಯರಲ್ಲಿ ಕುತೂಹಲ ಸೃಷ್ಟಿಸಿದೆ.
ಸನ್ಮಾನಕಾರ್ಯಕ್ರಮದ ಭಾಗವಾಗಿ ಯಕ್ಷರಂಗದ ಮೇಳದ ಯಜಮಾನರಿಗೆ, ಪಿಎಚ್ ಡಿ ಪ್ರಬಂಧ ಮಂಡಿಸಿದವರಿಗೆ ಹಾಗೂ ಬಡ ಕಲಾವಿದರಿಗೆ ಸನ್ಮಾನಿಸಲು ನಿರ್ಧರಿಸಲಾಗಿದೆ. ಸ್ವಾಗತ ಸಮಿತಿ, ವೇದಿಕೆ, ಆಹಾರ, ಮೂಲಸೌಕರ್ಯಕ್ಕಾಗಿ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ. ಯಕ್ಷಗಾನ ರಾಜ್ಯದ ಗಂಡುಕಲೆ. ಈ ಕಲಾಪ್ರಕಾರದ ಇತಿಹಾಸದಲ್ಲೇ ಮೊದಲ ಬಾರಿಗೆ ಯಕ್ಷಗಾನ ಸಾಹಿತ್ಯ ಸಮ್ಮೇಳನವನ್ನು ಕನ್ನಡ- ಸಂಸ್ಕ್ರತಿ ಇಲಾಖೆಯಿಂದ ಆಯೋಜಿಸಲಾಗಿದೆ. ಎಲ್ಲ ತಿಟ್ಟುಗಳ ಶ್ರೀಮಂತ ಕಲಾ ಪ್ರದರ್ಶನದ ಜತೆಗೆ ವಿದ್ವಜ್ಜನ ಮೆಚ್ಚುವ ರೀತಿ ಸಮ್ಮೇಳನ ನಡೆಸುತ್ತೇವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.