Advertisement

ಯಕ್ಷಗಾನ ಕಲಾವಿದ ತೋಡಿಕಾನ ವಿಶ್ವನಾಥ ಗೌಡ ನಿಧನ

09:23 AM Mar 18, 2022 | Team Udayavani |

ಉಡುಪಿ: ತೆಂಕುತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ವಿಶ್ವನಾಥ ಗೌಡ (62ವರ್ಷ) ಮಾ.17ರಂದು ರಂದು ಸಂಜೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

Advertisement

ಕುರಿಯ ವಿಠಲ ಶಾಸ್ತ್ರಿ ಮತ್ತು ಪಡ್ರೆ ಚಂದ್ರು ಅವರಲ್ಲಿ ಯಕ್ಷಗಾನ ತರಬೇತಿ ಪಡೆದು ನಾಲ್ಕುವರೆ ದಶಕಗಳಿಂದ ಕಲಾಸೇವೆಗೈದ ಇವರು ಸುಂಕದ ಕಟ್ಟೆ, ಕದ್ರಿ, ಕುಂಬಳೆ, ಕರ್ನಾಟಕ ಮೇಳಗಳಲ್ಲಿ ತಿರುಗಾಟ ಮಾಡಿ ಕಳೆದ ಮೂರು ದಶಕಗಳಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ದಮಯಂತಿ, ಚಂದ್ರಮತಿ, ಕಯಾದು, ಸೀತೆ, ಶ್ರೀದೇವಿ, ನಂದಿನಿ, ಯಶೋಮತಿ, ಅಜಮುಖಿ, ಶಾರದೆ, ಶಶಿಪ್ರಭೆಯೂ ಸೇರಿದಂತೆ ಹಲವು ಪೌರಾಣಿಕ ಪಾತ್ರಗಳಲ್ಲಿ ಅಭಿನಯಿಸಿ ಮಿಂಚಿದ್ದರು. ಕೋಳ್ಯೂರು ರಾಮಚಂದ್ರ ರಾವ್ ಗೌರವಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಯೂ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಇದನ್ನೂ ಓದಿ:‘ಪರಮಾತ್ಮ’ನ ಜಾತ್ರೆಯಲ್ಲಿ ಮಿಂದೇಳುತ್ತಿರುವ ಅಭಿಮಾನಿಗಳು…

ಮೃತರು ಪತ್ನಿ ಹಾಗೂ ಈರ್ವರು ಪುತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next