Advertisement
ಮಾ. 23ರಂದು ಸಮ್ಮೇಳನವನ್ನು ಸಾಣೇಹಳ್ಳಿಯ ಡಾ| ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಲಿದ್ದು, ಸಮ್ಮೇಳನಾಧ್ಯಕ್ಷ ಕಂದಾವರ ರಘುರಾಮ ಶೆಟ್ಟಿ, ಶಾಸಕರಾದ ಗೋಪಾಲ ಪೂಜಾರಿ, ಪ್ರತಾಪ್‌ಚಂದ್ರ ಶೆಟ್ಟಿ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ಮಾ. 24ರಂದು ಎಡನೀರು ಶ್ರೀ, ಕೆಪಿಎಸ್‌ಸಿ ಅಧ್ಯಕ್ಷ ಡಾ| ಟಿ. ಶ್ಯಾಮ ಭಟ್, ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಳ್ಳಲಿದ್ದಾರೆ. ಮಾ. 25ರ ಸಮಾರೋಪ ಸಮಾರಂಭದಲ್ಲಿ ಮಣಿಪಾಲ ವಿ.ವಿ.ಯ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ| ಎಂ.ಎಲ್. ಸಾಮಗ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ರಮೇಶ್ ಚಿಂಬಾಲ್ಕರ್, ಪತ್ರಕರ್ತ ಯು.ಎಸ್. ಶೆಣೈ, ಉಪಾಧ್ಯಕ್ಷ ವಿಶ್ವನಾಥ ಕರಬ, ಸಹ ಕಾರ್ಯದರ್ಶಿ ರಾಜಾರಾಮ ಭಟ್, ಸುಮಲತಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಯಕ್ಷಗಾನ ಸಾಧಕರಾದ ಗೋವಿಂದ ನಾಯಕ್ (ತೆಂಕು), ಕೆ. ಸದಾನಂದ ಐತಾಳ (ಬಡಗು), ರವೀಂದ್ರ ತಲಕಾಡು (ಮೂಡಲಪಾಯ- ಮೈಸೂರು), ಎಚ್.ಸಿ. ಶಿವಬುದ್ಧಿ (ಗೊಂಬೆಯಾಟ), ಆನಂದ ಸಿದ್ದವೀರಪ್ಪ ಮಗುದಂ (ಶ್ರೀಕೃಷ್ಣ ಪಾರಿಜಾತ), ಬಸವರಾಜ ಬಾ. ಮದೀಹಳ್ಳಿ (ಸಣ್ಣಾಟ), ವೀರಭದ್ರಪ್ಪ ಶಿವಪುತ್ರಪ್ಪ ಹರ್ತಿ (ದೊಡ್ಡಾಟ- ಗೋಕಾಕ), ನೀಲಪ್ಪ ಹೊನ್ನಪ್ಪ ಜೋಗಿ (ಬಯಲಾಟ), ಸುರೇಂದ್ರ ಪಣಿಯೂರು (ಸಂಘಟನೆ), ಕರ್ಗಲ್ಲು ವಿಶ್ವೇಶ್ವರ ಭಟ್ (ಜೀವಮಾನ ಸಾಧನೆ) ಅವರನ್ನು ಸಮ್ಮಾನಿಸಿ, ಗೌರವಿಸಲಾಗುವುದು.