Advertisement

‘ದೈಹಿಕ, ಬೌದ್ಧಿಕ ಬೆಳವಣಿಗೆಗೆ ಯಕ್ಷಗಾನ ಸಹಕಾರಿ’

12:41 AM Jun 20, 2019 | Team Udayavani |

ಮಲ್ಪೆ: ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿ ಕೊಂಡಲ್ಲಿ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ವಹಿಸಬೇಕು ಎಂದು ರಂಗನಟ, ಯಕ್ಷಗಾನ ಕಲಾವಿದ ಎಂ.ಎಸ್‌.ಭಟ್ ನುಡಿದರು.

Advertisement

ಅವರು ಸುಮನಸಾ ಕೊಡವೂರು ಸಂಸ್ಥೆಯು ಯಕ್ಷಗಾನ ಕೇಂದ್ರ ಇಂದ್ರಾಳಿ, ಕನ್ನಡ ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕೊಡವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ಯಕ್ಷಗಾನ ಹೆಜ್ಜೆ ಪುನಃಶ್ಚೇತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು.

20 ದಿನಗಳ ಕಾಲ ಹಮ್ಮಿಕೊಂಡ ಶಿಬಿರದಲ್ಲಿ 30 ಶಿಬಿರಾರ್ಥಿಗಳು ಭಾಗವಹಿಸಿದ್ದರು. ವೇದಿಕೆಯಲ್ಲಿ ಸುಮನಸಾದ ಅಧ್ಯಕ್ಷ ಪ್ರಕಾಶ್‌ ಜಿ.ಕೊಡವೂರು, ಜತೆ ಕಾರ್ಯದರ್ಶಿ ಪ್ರಜ್ಞಾ ಅಮೀನ್‌, ಯಕ್ಷಗಾನ ಗುರು ನಿಶ್ಚಲ್ ಉಪಸ್ಥಿತರಿದ್ದರು. ಯೋಗಿಶ್‌ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next