Advertisement
ತಾಲೂಕಿನ ಗುಣವಂತೆಯಲ್ಲಿ 13ನೇ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೆರೆಮನೆ ಇಡೀ ಕುಟುಂಬ 4 ತಲೆಮಾರಿನ ಮೂಲಕ ಯಕ್ಷಗಾನವನ್ನು ಆರಾಧಿಸುವ ಮೂಲಕ ಈ ಕ್ಷೇತ್ರಕ್ಕೆ ಹೊಸ ಮೈಲು ಗಲ್ಲನ್ನು ಕೊಟ್ಟಿದೆ. ಒಂದು ಕುಟುಂಬ ನಾಲ್ಕನೇ ತಲೆಮಾರಿಗೆ ಯಕ್ಷಗಾನವನ್ನು ಮುಂದುವರಿಸಿಕೊಂಡು ಬಂದಿರುವುದು ಅಭಿನಂದನಾರ್ಹ. ನಾಗರಿಕ ಸಮಾಜಕ್ಕೆ ಸಂಸ್ಕೃತಿ, ಭಾಷೆ, ಕಲೆ ಅತಿ ಅಗತ್ಯ.
Related Articles
Advertisement
ಮಂಡಳಿ ವತಿಯಿಂದ ವಿಶೇಷ ಸನ್ಮಾನ ಸ್ವೀಕರಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಸಾಂಸ್ಕೃತಿಕ ಮೌಲ್ಯ ಹೆಚ್ಚಿಸಿ ಮುಂದಿನ ತಲೆಮಾರಿಗೆ ಪರಿಚಯಿಸಲು ಕಲೆ ಬಹುಮುಖ್ಯವಾಗಿದೆ. 84 ವರ್ಷದ ಸುದೀರ್ಘ ಅವಧಿವರೆಗೆ ಸಾಂಸ್ಕೃತಿಕ ಹಿರಿಮೆ ಹೆಚ್ಚಿಸಿದ್ದು, ಆ ಪರಂಪರೆ ಕಾಪಾಡಿಕೊಳ್ಳಲು ತಮ್ಮ ಬದ್ಧತೆ ಕಾಪಾಡಿಕೊಳ್ಳಬೇಕಿದೆ. ಇಂದು ಬಡತನದಲ್ಲಿರುವ ಜನ ಕಲೆಯನ್ನು ಉಳಿಸಲು ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ. ಇಂದಿನ ಸಮೃದ್ಧ ಸ್ಥಿತಿಯಲ್ಲಿ ಕಲೆ ಉಳಿಸುವುದು ಸವಾಲಿನ ಕೆಲಸ. ಸಾಂಸ್ಕೃತಿಕ ಮೌಲ್ಯವನ್ನು ಉಳಿಸಲು ಕಲೆಯನ್ನು ಉಳಿಸಬೇಕು. ಪಠ್ಯದಲ್ಲಿ ಯಕ್ಷಗಾನ ತರಲು ಸಿದ್ಧತೆ ಆಗಿದೆ ಎಂದರು.
ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಹಾಗೂ ಅಂಕಣಕಾರರಾದ ಭಾಸ್ಕರ್ ರಾವ್, ಹಿರಿಯ ಪತ್ರಕರ್ತ ಬಿ.ಗಣಪತಿ, ನಟ ವಾಗ್ಮಿ ಅನಂತ ಭಟ್ ಹುಳಗೋಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಡಗುಂಜಿ ಮೇಳದ ನಿರ್ದೇಶಕರಾದ ಕೆರಮನೆ ಶಿವಾನಂದ ಹೆಗಡೆ ಸ್ವಾಗತಿಸಿ ಅಭಿನಂದಿಸಿದರು.
ಸಭಾ ಕಾರ್ಯಕ್ರಮದ ನಂತರ ಕೇರಳದ ಕಲಾಮಂಡಲಂ ಸುಕುಮಾರನ್ ತಂಡದಿಂದ ಕಥಕ್ಕಳಿ, ಕಿರಾತಾರ್ಜುನೀಯಂ, ಮನ್ಮಥ ರತಿ ಯಕ್ಷಗಾನ ಮತ್ತು ಭರತನಾಟ್ಯ ರೂಪಕ ಪ್ರದರ್ಶನಗೊಂಡಿತು.