ಹೊನ್ನಾವರ: ತಮ್ಮ ಬಣ್ಣದ ವೇಷದ ಖ್ಯಾತಿಯಿಂದ ‘ಬಣ್ಣದ ಕುಷ್ಟ’ ಎಂದೇ ಪರಿಚಿತರಾಗಿದ್ದ ಕೃಷ್ಣಯ್ಯ ಮಂಜಯ್ಯ ಶೆಟ್ಟಿ ಯಾನೆ ಕುಷ್ಟ ಗಾಣಿಗ ಇಂದು (6-12-2020) ಬೆಳಗಿನ ಜಾವ ಹೊನ್ನಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಐವರು ಪುತ್ರಿಯರನ್ನು ಅಗಲಿದ್ದಾರೆ.
ಕರ್ಕಿ, ಗುಂಡಬಾಳ, ಇಡಗುಂಜಿ, ಅಮೃತೇಶ್ವರೀ ಮೇಳಗಳಲ್ಲಿ ಐದು ದಶಕಗಳ ಕಲಾಸೇವೆಗೈದಿದ್ದರು. ಎಲ್ಲಾ ರೀತಿಯ ವೇಷಗಳನ್ನು ಮಾಡುತ್ತಿದ್ದ ಅವರು ಬಣ್ಣ ಮತ್ತು ಕಿರಾತ ವೇಷಗಳಲ್ಲಿ ವಿಶೇಷ ಸಿದ್ಧಿ ಪಡೆದಿದ್ದರು.
ಇದನ್ನೂ ಓದಿ: ರೈತರ ಬೇಡಿಕೆ ಈಡೇರಿಸದಿದ್ದರೇ ಖೇಲ್ ರತ್ನ ಪ್ರಶಸ್ತಿ ಹಿಂದಿರುಗಿಸುತ್ತೇನೆ: ವಿಜೇಂದರ್ ಸಿಂಗ್
ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿಯೂ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು. ಅವರ ಅಗಲಿಕೆಗೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮರಾಠಿ ಚಿತ್ರರಂಗದ ಹಿರಿಯ ನಟ ರವಿ ಪಟವರ್ಧನ್ ನಿಧನ ; ಮಹಾರಾಷ್ಟ್ರ ಮುಖ್ಯಮಂತ್ರಿ ಸಂತಾಪ