Advertisement

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

11:37 AM Jan 24, 2022 | Team Udayavani |

ಕುಂದಾಪುರ:

Advertisement

ಯಕ್ಷಗಾನದ ಪ್ರಸಿದ್ಧ ಹಿರಿಯ ಸ್ತ್ರೀ ವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್‌(96)ಅವರು ಜ. 23ರಂದು ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಹಿರಿಯ ಕಲಾವಿದ ಮಾರ್ಗೋಳಿಯವರ ಅಗಲುವಿಕೆಗೆ ಯಕ್ಷಗಾನ ಕಲಾರಂಗ ಗಾಢ ಸಂತಾಪ ವ್ಯಕ್ತಪಡಿಸಿದೆ.

ಕುಂದಾಪುರದಿಂದ ಬಸ್ರೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಬರುವ ಮಾರ್ಗೋಳಿ ಎನ್ನುವ ಪುಟ್ಟ ಗ್ರಾಮದ ನರಸಿಂಹ ಶೇರಿಗಾರ ಹಾಗೂ ಸುಬ್ಬಮ್ಮ ದಂಪತಿಗಳ ಪುತ್ರನಾಗಿ ಜನಿಸಿದ್ದ ಅವರು ಯಕ್ಷಗಾನ ಕಲೆಯ ಮೇಲಿರುವ ಅಪರಿಮಿತ ಆಸಕ್ತಿಯಿಂದಾಗಿ 13 ನೇ ವಯಸ್ಸಿನಲ್ಲಿಯೇ ಬಡಗುತಿಟ್ಟಿ ಹೆಸರಾಂತ ಮೇಳಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಮಂದಾರ್ತಿ ಮೇಳವನ್ನು ಸೇರಿದ್ದರು. ಪಾರಂಪರಿಕ ಯಕ್ಷಗಾನ ಗುರುಗಳಾದ ವೀರಭಧ್ರ ನಾಯಕ್, ಕೊಕ್ಕರ್ಣೆ ಗುಂಡು ನಾಯಕ್, ನರಸಿಂಹ ಕಾಮತ್ ಮುಂತಾದ ಹಿರಿಯ ಕಲಾವಿದರ ಗರಡಿಯಲ್ಲಿ ಯಕ್ಷಗಾನದ ಸಾಂಪ್ರದಾಯಿಕ ಹೆಜ್ಜೆಯ ಕರಗತ ಮಾಡಿಕೊಂಡ ಅವರು ಅತ್ಯಲ್ಪ ಕಾಲದಲ್ಲಿಯೇ ಬಡಗುತಿಟ್ಟಿನ ಪ್ರಮುಖ ಸ್ತ್ರೀ ವೇಷಧಾರಿಯಾಗಿ ಗುರುತಿಸಿಕೊಂಡಿದ್ದರು.

ಯಕ್ಷರಂಗ ಸೇವೆಯ ಬಹು ಪಾಲು ಅಂದರೆ ಅಂದಾಜು 38 ವರ್ಷಗಳ ಕಾಲ ಸ್ತ್ರೀ ವೇಷಧಾರಿಯಾಗಿ ರಂಗ ಮೇಲೆ ಅಭಿನಯ ಶಾರದೆಯಾಗಿ ಮೆರೆದಿದ್ದ ಅವರು ಬಡಗುತಿಟ್ಟಿನ ಪ್ರಸಿದ್ದ ಮೇಳಗಳಾದ ಶ್ರೀ ಕ್ಷೇತ್ರ ಮಂದಾರ್ತಿ, ಶ್ರೀ ಕ್ಷೇತ್ರ ಮಾರಣಕಟ್ಟೆ, ಶ್ರೀ ಕ್ಷೇತ್ರ ಸೌಕೂರು, ಶ್ರೀ ಕ್ಷೇತ್ರ ಅಮೃತೇಶ್ವರಿ. ಶ್ರೀ ಕ್ಷೇತ್ರ ಇಡಗುಂಜಿ, ಶ್ರೀ ಕ್ಷೇತ್ರ ಕಮಲಶಿಲೆ ಮೇಳಗಳಲ್ಲಿ ಹಾಗೂ ವೃತ್ತಿ ಮೇಳಗಳಾದ ಪೆರ್ಡೂರು ಹಾಗೂ ಸಾಲಿಗ್ರಾಮ ಮೇಳಗಳಲ್ಲಿ ಬಣ್ಣದ ಸೇವೆಯನ್ನು ಮಾಡುವ ಮೂಲಕ ಸುಮಾರು 5 ದಶಕಗಳ ಕಾಲ ಯಕ್ಷಾಭಿಮಾನಿಗಳ ಹೃದಯ ಸಿಂಹಾಸನದ ಅನಭಿಷಿಕ್ತ ರಾಣಿಯಾಗಿದ್ದರು.

Advertisement

ಬಡಗುತಿಟ್ಟಿನ ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ದವಾದ ಹಾಗೂ ಭಕ್ತಿಪೂರ್ಣವಾದ ಪ್ರಸಂಗ ಶ್ರೀ ದೇವಿ ಮಾಹಾತ್ಮೆ ಪ್ರಸಂಗದ ಬಡಗುತಿಟ್ಟಿನ ಮೊದಲ ಪ್ರಯೋಗ ನಡೆದದ್ದು, ಶ್ರೀ ಕ್ಷೇತ್ರ ಮಂದಾರ್ತಿಯಲ್ಲಿ,. ಮೊದಲ ಪ್ರದರ್ಶನದಲ್ಲಿ ಶ್ರೀ ದೇವಿಯಾಗಿ ಬಣ್ಣ ಹಚ್ಚಿದ್ದು ಮಾರ್ಗೋಳಿಯವರು ಎಂಬ ದಾಖಲೆಯಿದೆ.

ಐವತ್ತು ವರುಷಗಳ ರಂಗ ಬದುಕಿನಲ್ಲಿ ತೆಂಕು ಬಡಗಿನಲ್ಲಿ ತಿರುಗಾಟ ಮಾಡಿದ ಮಾರ್ಗೋಳಿಯವರು ಬಡಗು ತಿಟ್ಟಿನ ಪ್ರಾತಿನಿಧಿಕ ಕಲಾವಿದರು. ಬಡಗಿನ ಹಳೆಯ ಕ್ರಮಗಳ ಬಗ್ಗೆ ಅಧಿಕೃತ ಅನುಭವದ ಆಗಾರವಾಗಿದ್ದರು ನಾಲ್ಕನೇ ತರಗತಿ ತನಕ ವಿದ್ಯಾಭ್ಯಾಸ ಮಾಡಿದ್ದ ಆರು ಅನಿವಾರ್ಯತೆಯೊಂದಿಗೆ ಬೆಳೆದು, ಬಡಗುತಿಟ್ಟಿನ ಬಹುತೇಕ ಖ್ಯಾತರೊಡನೆ ಪಾತ್ರವಹಿಸಿ, ತಾನೂ ಗಟ್ಟಿಯಾಗಿ ರ ತೆಂಕುಟ್ಟಿನಲ್ಲಿ ಪ್ರಸಿದ್ಧವಾದ ‘ದೇವಿ ಮಹಾತ್ಮೆ’ ಪ್ರಸಂಗದ ‘ಶ್ರೀದೇವಿ’ ಪಾತ್ರಕ್ಕೆ ಬಡಗಿನ ರಂಗದಲ್ಲಿ ಜೀವತುಂಬಿ, ಅದಕ್ಕೆ ಪ್ರತ್ಯೇಕವಾದ ಎತ್ತರದ ಸ್ಥಾನ ರೂಪಿಸಿದ ಕೀರ್ತಿ ಪಡೆದಿದ್ದರು. ಅವರ ಸಾಧನೆಗೆ, ಕಾಲ ಸೇವೆಗೆ ನೂರಾರು ಸನ್ಮಾನಗಳು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next