Advertisement

ಪೆರ್ಡೂರು ಮೇಳ: ಜನ್ಸಾಲೆ ಸ್ಥಾನಕ್ಕೆ ಧಾರೇಶ್ವರ

01:09 AM Nov 24, 2021 | Team Udayavani |

ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ 9 ವರ್ಷದ ಬಳಿಕ ಮತ್ತೆ ಈ ತಿರುಗಾಟದಿಂದ ರಂಗಮಂಚವೇರಲಿದ್ದಾರೆ.

Advertisement

ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್‌ ನಿರ್ಗಮಿಸಿದ್ದಾರೆ. ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್‌ ಕಿರಣ್‌ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ.

ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ ಬಳಿಕ ಮೇಳದ ನೂತನ ಪ್ರಸಂಗದ ಕರಪತ್ರಗಳಲ್ಲಿ ಜನ್ಸಾಲೆಯವರ ಭಾವಚಿತ್ರ ಹಾಗೂ ಹೆಸರು ನಮೂದಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ನಡೆದ ಬೆಳವಣಿಗೆಯಲ್ಲಿ ರಾಘವೇಂದ್ರ ಆಚಾರ್ಯ ಅವರು ಮೇಳದಲ್ಲಿ ಮುಂದುವರಿಯಲು ನಿರಾ ಕರಿಸಿದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ.

ಇದನ್ನೂ ಓದಿ:ಬೆಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ: ಡಿಕೆಶಿ

ಪೆರ್ಡೂರು ಮೇಳ ಬಿಟ್ಟ ಬಳಿಕ ಯಾವುದೇ ಮೇಳ ತಿರುಗಾಟ ಮಾಡಿರಲಿಲ್ಲ. ಈಗ ಕರುಣಾಕರ ಶೆಟ್ಟಿ ಅವರು ಮತ್ತೆ ಮೇಳಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ.
– ಭಾಗವತ ಸುಬ್ರಹ್ಮಣ್ಯ ಧಾರೇಶ್ವರ

Advertisement

ಹಗಲು ಹೊತ್ತಿನಲ್ಲಿ ಕೂಡ ಗಾನವೈಭವ, ತಾಳಮದ್ದಳೆಯಂತಹ ಕಾರ್ಯಕ್ರಮಗಳಿಗೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ನನ್ನನ್ನು ನಾನು ಮಾರಿಕೊಳ್ಳಲು ತಯಾರಿಲ್ಲ. ಆದ್ದರಿಂದ ಪೆರ್ಡೂರು ಮೇಳದ ತಿರುಗಾಟಕ್ಕೆ ವಿದಾಯ ಹೇಳಿದ್ದೇನೆ.
– ಜನ್ಸಾಲೆ ರಾಘವೇಂದ್ರ ಆಚಾರ್ಯ, ಭಾಗವತ

ಮೇಳದ ವ್ಯವಸ್ಥೆಗಳಿಗೆ ಜನ್ಸಾಲೆ ಅವರು ಒಪ್ಪದೇ ಇರುವುದರಿಂದ ಬದಲಾವಣೆ ಅನಿವಾರ್ಯ ಬಂತು. ಧಾರೇಶ್ವರ ಅವರು ಮೇಳದಲ್ಲಿ ಮುಂದುವರಿಯಲಿದ್ದಾರೆ. ಪ್ರದರ್ಶನ ಪೂರ್ವ ತಯಾರಿಗಳು ಅವರ ನಿರ್ದೇಶನದಲ್ಲಿ ಆರಂಭವಾಗಿವೆ.
– ವೈ. ಕರುಣಾಕರ ಶೆಟ್ಟಿ, ಪೆರ್ಡೂರು ಮೇಳದ ಯಜಮಾನರು

Advertisement

Udayavani is now on Telegram. Click here to join our channel and stay updated with the latest news.

Next