Advertisement
ಪರಂಪರೆ ಉಳಿವಿಗೆ ಹೋರಾಟಸುಮಾರು 350 ವರ್ಷಗಳ 6 ನೇ ತಲಾಂತರದ ವಿಶಿಷ್ಟ, ವಿಶೇಷ ಕಲಾ ಪರಂಪರೆಯ ಉಳಿವಿಗಾಗಿ ಹಗಲಿರುಳೆನ್ನದೆ ಹೋರಾಟ ಮಾಡುತ್ತಾ ಬಂದಿರುವ ಸಂಸ್ಥೆಯು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡದಲ್ಲಿ ಕಳೆದ 3 ವರ್ಷಗಳಿಂದ ನಿರಂತರ ತಿಂಗಳ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನಡೆಸಿಕೊಂಡು ಬರುತ್ತಿದೆ. ಸರಕಾರದ ಯಾವುದೇ ಧನ ಸಹಾಯ ಪಡೆಯದೆ ಹೋರಾಡುತ್ತಿರುವುದು ಈ ತಂಡದ ವಿಶೇಷವೆನ್ನಬಹುದು.
ಸೆ. 1ರಂದು ಶ್ರೀ ಮೂಕಾಂಬಿಕಾ ಪ್ರೌಢ ಶಾಲೆ, ಮಾವಿನಕಟ್ಟೆಯಲ್ಲಿ ಶಾಲೆಯೆಡೆಗೆ ಗೊಂಬೆ ನಡಿಗೆ ಉದ್ಘಾಟನೆಗೊಳ್ಳಲಿದೆ. ಅನಂತರ ಸೆ. 4ರಿಂದ 15ರ ವರೆಗೆ ಸರಸ್ವತಿ ಪದವಿ ಪೂರ್ವ ಕಾಲೇಜು ಕುಮಟಾ, ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್, ಗೇರುಸೊಪ್ಪೆ, ಎಸ್.ಡಿ.ಎಂ. ಕಾಲೇಜು ಹೊನ್ನಾವರ, ದ ನ್ಯೂ ಇಂಗ್ಲಿಷ್ ಪ.ಪೂ. ಕಾಲೇಜು, ಅಯೋಧ್ಯಾನಗರ, ಭಟ್ಕಳ, ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಬ್ರಹ್ಮಾವರ, ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ, ಕಲ್ಯಾಣಪುರ, ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಡುಪಿ, ಮಾಧವ ಕೃಪ ಇಂಗ್ಲಿಷ್ ನರ್ಸರಿ ಮತ್ತು ಹೈಯರ್ ಪ್ರೈಮರಿ ಸ್ಕೂಲ್, ಮಣಿಪಾಲ, ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ, ಸ. ಪ.ಪೂ. ಕಾಲೇಜು, (ಪ್ರೌಢ ಶಾಲಾ ವಿಭಾಗ) ಕುಂದಾಪುರ, ಶಾರದಾ ಕಾಲೇಜ್ ಬಸೂÅರು, ಶ್ರೀ ಸಿದ್ಧಿ ವಿನಾಯಕ ರೆಸಿಡೆನ್ಶಿಯಲ್ ಸ್ಕೂಲ್, ಹಟ್ಟಿಯಂಗಡಿ, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗ ವಂಡ್ಸೆ, ಶ್ರೀ ಮೂಕಾಂಬಿಕಾ ಪ.ಪೂ. ಕಾಲೇಜು ಕೊಲ್ಲೂರು, ಗ್ರೆಗರಿ ಪ್ರೌಢ ಶಾಲೆ ನಾಡ- ಪಡುಕೋಣೆ, ಸರಕಾರಿ ಪ್ರೌಢ ಶಾಲೆ ಹಕ್ಲಾಡಿ, ಶ್ರೀ ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಖಂಬದಕೋಣೆ, ಗೋವಿಂದದಾಸ್ ಕಾಲೇಜು ಸುರತ್ಕಲ್, ಕೆನರಾ ಹೈಸ್ಕೂಲ್ ಮಂಗಳೂರು, ಎಚ್.ಎಚ್. ಎಸ್. ಐ. ಬಿ. ಸ್ವಾಮೀಜಿಸ್ ಹೈಯರ್ ಸೆಕೆಂಡರಿ ಸ್ಕೂಲ್ ಎಡನೀರು ಕಾಸರಗೋಡಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಕಲೆಗಳ ಬಗ್ಗೆ ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡುವ ಯಾವುದೇ ಅವಕಾಶ ಕಲ್ಪಿಸದೇ ಇರುವುದರಿಂದ ಮಕ್ಕಳಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿ ಅವರಲ್ಲಿ ಈ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಉಪ್ಪಿನಕುದ್ರು ಬೊಂಬೆಯಾಟ ತಂಡ ಶಾಲೆಯಡೆಗೆ ಬೊಂಬೆ ನಡಿಗೆ ಎನ್ನುವ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಮ್ಮ ತಂಡ ಈಗಾಗಲೇ ವಿದೇಶಗಳ ನೆಲದಲ್ಲಿ ಈ ರೀತಿಯ ಪ್ರಯೋಗಳನ್ನು ಮಾಡಿ ಯಶಸ್ವಿಯಾಗಿದ್ದು ಶಿಕ್ಷಣದ ಜೊತೆಗೆ ಕನ್ನಡ ಸಂಸ್ಕೃತಿಯನ್ನು ಬೆಳೆಸುವ ಕೈಂಕರ್ಯದಲ್ಲಿ ತೊಡಗಿಕೊಂಡಿದೆ.
-ಭಾಸ್ಕರ ಕೊಗ್ಗ ಕಾಮತ್, ಸಂಚಾಲಕರು, ಉಪ್ಪಿನಕುದ್ರು ಗೊಂಬೆಯಾಟ ಸಂಸ್ಥೆ
Related Articles
Advertisement