Advertisement

ಮಂಗಳೂರು ವಿವಿ : 15 ಮಂದಿಗೆ ದಶಮಾನೋತ್ಸವ,ಇಬ್ಬರು ಸಾಧಕರಿಗೆ ಕೃತಿ ಪ್ರಶಸ್ತಿ

09:19 AM Nov 13, 2021 | Team Udayavani |

ಮಂಗಳಗಂಗೋತ್ರಿ: ದಶಮ ಸಂಭ್ರಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್‌ ಪೈ ಯಕ್ಷಗಾನ ಅಧ್ಯಯನ ಕೇಂದ್ರವು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. ತೆಂಕು ಬಡಗುತಿಟ್ಟಿನ ಹಿಮ್ಮೇಳ ಹಾಗೂ ಮುಮ್ಮೇಳ ಸಹಿತ ಹದಿನೈದು ಮಂದಿ “ದಶಮಾನೋತ್ಸವ ಪ್ರಶಸ್ತಿ’ಗೆ ಹಾಗೂ ಯಕ್ಷಗಾನ ಸಾಹಿತ್ಯ ಕ್ಷೇತ್ರದ ಇಬ್ಬರು ಸಾಧಕರಿಗೆ “ಕೃತಿ ಪ್ರಶಸ್ತಿ’ ನೀಡಲಾಗುತ್ತಿದೆ.

Advertisement

ಮುಮ್ಮೇಳದ ಸಾಧಕರಾದ ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ, ಪೇತ್ರಿ ಮಾಧವ ನಾಯ್ಕ, ಮುಖ್ಯಪ್ರಾಣ ಕಿನ್ನಿಗೋಳಿ, ಕೃಷ್ಣ ಯಾಜಿ ಬಳ್ಕೂರು, ಆರ್ಗೋಡು ಮೋಹನ್‌ ದಾಸ್‌ ಶೆಣೈ, ಶಿವ ರಾಮ ಜೋಗಿ, ಪೂಕಳ ಲಕ್ಷ್ಮೀನಾರಾಯಣ ಭಟ್‌, ಉಬರಡ್ಕ ಉಮೇಶ್‌ ಶೆಟ್ಟಿ, ಕುಂಬ್ಳೆ ಶ್ರೀಧರ ರಾವ್, ಹಿಮ್ಮೇಳ ಕ್ಷೇತ್ರದ ಸಾಧಕರಾದ ಸುಬ್ರಹ್ಮಣ್ಯ ಧಾರೇಶ್ವರ, ಕುರಿಯ ಗಣಪತಿ ಭಟ್‌, ಪುತ್ತಿಗೆ ರಘುರಾಮ ಹೊಳ್ಳ, ದಿನೇಶ ಅಮ್ಮಣ್ಣಾಯ, ಪದ್ಯಾಣ ಶಂಕರನಾರಾಯಣ ಭಟ್‌, ಹರಿನಾರಾಯಣ ಬೈಪಾಡಿತ್ತಾಯ, ಯಕ್ಷಗಾನ ಸಾಹಿತ್ಯ ಕ್ಷೇತ್ರದಲ್ಲಿ ಕೃತಿಗಳನ್ನು ರಚಿಸಿರುವ ಡಾ| ಉಪ್ಪಂಗಳ ಶಂಕರನಾರಾಯಣ ಭಟ್‌, ಡಾ| ಚಂದ್ರಶೇಖರ್‌ ದಾಮ್ಲೆ ಅವರು ದಶಮಾನೋತ್ಸವದ “ಕೃತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಈ ದಶಮಾನೋತ್ಸವದ ಸಂದರ್ಭದಲ್ಲಿ ಯಕ್ಷಗಾನಕ್ಕೆ ಹಾಗೂ ಯಕ್ಷಗಾನ ಕೇಂದ್ರದ ಬೆಳವಣಿಗೆಗೆ ಸಹಕಾರ ನೀಡಿದ ಮಹನೀಯರನ್ನು ಗೌರವಿಸಲಾಗುವುದು. ನವೆಂಬರ್‌ ಕೊನೆಯ ವಾರದಲ್ಲಿ ನಡೆಯುವ ದಶಮಾನೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ, ಗೌರವ ಸಮ್ಮಾನ ನೀಡಿ ಗೌರವಿಸಲಾಗುವುದು ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ| ಶ್ರೀಪತಿ ಕಲ್ಲೂರಾಯ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next