Advertisement

Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ

11:19 PM Dec 03, 2024 | Team Udayavani |

ಉಡುಪಿ: ರಾಗ ತಪಸ್ವಿ, ಗಾನ ಯೋಗಿ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಶಿರಸಿ ಸಮೀಪದ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ (94) ಅವರು ಡಿ. 1ರಂದು ನಿಧನ ಹೊಂದಿದರು.

Advertisement

ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಏಳು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಪದ್ಯ ಹಾಡುತ್ತಾ ಹೊಸ ರಾಗಗಳನ್ನು ಅನ್ವೇಷಿಸುತ್ತಾ ಸಂಗೀತಕ್ಕಾಗಿಯೇ ತಮ್ಮನ್ನು ಸಮರ್ಪಿಸಿಕೊಂಡವರು. ಹೊಸ್ತೋಟ ಮಂಜುನಾಥ ಭಾಗವತರೂ ಸೇರಿದಂತೆ ಆ ಕಾಲದ ಹಿರಿಯ ಕಲಾವಿದರೊಂದಿಗೆ ನಿಕಟ ಒಡನಾಟ ಹೊಂದಿದ್ದ ಅವರು ಯಕ್ಷಗಾನ ಪದ್ಯಗಳಿಗೆ ರಾಗಗಳನ್ನು ಸಂಯೋಜಿಸಿಕೊಂಡು ಪ್ರತೀವರ್ಷ ನೂರಾರು ತಾಳಮದ್ದಳೆಗಳಲ್ಲಿ ಭಾಗವಹಿಸುತ್ತಿದ್ದರು.

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತರಾಗಿರುವ ಅವರಿಗೆ 2018ರಲ್ಲಿ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಯಕ್ಷಗಾನ ಕಲಾರಂಗ ಸಂತಾಪ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next