ನಟ ಕೋಮಲ್ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿರುವ “ಯಲಾ ಕುನ್ನಿ’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ಮುಹೂರ್ತಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ವಜ್ರಮುನಿರವರ ಕುಟುಂಬದ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.
“ಯಲಾಕುನ್ನಿ’… ಖ್ಯಾತ ನಟ ವಜ್ರಮುನಿ ಅವರ ಚಿತ್ರಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದ ಪದ. ಈಗ ಆ ಪದವೇ ಚಿತ್ರದ ಶೀರ್ಷಿಕೆಯಾಗಿದ್ದು, ಮೇರಾ ನಾಮ್ ವಜ್ರಮುನಿ..! ಎಂಬುದು ಚಿತ್ರದ ಅಡಿಬರಹವಾಗಿದೆ. “ನಾನು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕ ಪ್ರದೀಪ್ ಬಹಳ ಚೆನ್ನಾಗಿ ಕಥೆ, ಚಿತ್ರಕಥೆ , ಸಂಭಾಷಣೆ ಬರೆದಿದ್ದಾರೆ. ಚಿತ್ರದ ಮುಕ್ಕಾಲು ಭಾಗ 1981ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಗಂಜಾಂ ಬಳಿ ಪುರಾತನ ದೇವಾಲಯವಿದ್ದು, ಆ ದೇವಾಲಯದಲ್ಲೇ ಹೆಚ್ಚಿನ ಚಿತ್ರೀಕರಣವಾಗಲಿದೆ. ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗುವುದು’ ಎಂದು ನಾಯಕ ಕೋಮಲ್ ಕುಮಾರ್ ಚಿತ್ರದ ಕುರಿತು ತಿಳಿಸಿದರು.
“ನಾನು ಕನ್ನಡದ ಹಿರಿಯ ನಿರ್ದೇಶಕರ ಬಳಿ ಕೆಲಸ ಮಾಡಿದ್ದೀನಿ. ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಹಿಂದೆ ಸಡಗರ ಚಿತ್ರ ನಿರ್ಮಿಸಿದ್ದ ಮಹೇಶ್ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿ¨ªಾರೆ. ಮತ್ತೂಂದು ವಿಶೇಷವೆಂದರೆ ವಜ್ರಮುನಿಯವರ ಮೊಮ್ಮಗ ಆಕರ್ಷ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಹೊಸ ಪ್ರತಿಭೆ ನಿಸರ್ಗ ಈ ಚಿತ್ರದ ನಾಯಕಿ. ಚಿತ್ರದ ಹಿನ್ನಲೆಯು ಗೋವಿನ ಹಾಡಿನಲ್ಲಿ ಬರುವ ವ್ಯಾಘ್ರ ಹುಲಿ ಆರ್ಭಟ ಮತ್ತು ಸತ್ಯವೇ ಭಗವಂತನೆಂದ ಪುಣ್ಯಕೋಟಿಯ ಕಥೆಯಿಂದ ಪ್ರೇರಿತವಾಗಿದೆ. ಏಪ್ರಿಲ್‌ನಲ್ಲಿ ಚಿತ್ರೀಕರಣ ಆರಂಭವಾಗಲಿದೆ’ ಎಂದು ನಿರ್ದೇಶಕ ಪ್ರದೀಪ್ ತಿಳಿಸಿದರು.
ಆಕರ್ಷ್, ನಿಸರ್ಗ, ಯತಿರಾಜ್ ಜಗ್ಗೇಶ್, ಫ್ರೆಂಚ್ ಬಿರಿಯಾನಿ ಮಹಾಂತೇಶ್ , ಜಯಸಿಂಹ ಮುಸುರಿ, ಅರವಿಂದ್ ರಾವ್, ಮಂಜು ಪಾವಗಡ, ರಾಜು ತಾಳಿಕೋಟೆ, ಶಿವರಾಜ್, ಬಿರಾದರ್, ವೆಂಕಟೇಶ್ ಪ್ರಸಾದ್ ,ಉಮೇಶ್ ಸಕ್ಕರೆನಾಡು, ಅನಿಲ್ ಯಾದವ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
Related Articles
ಧರ್ಮವಿಶ್ ಸಂಗೀತ ನಿರ್ದೇಶನ ಹಾಗೂ ಉದಯ್ ಲೀಲಾ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ , ವಿನೋದ್ ರವರ ಸಾಹಸ ಈ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಕೋಮಲ್ ಕುಮಾರ್ ವಜ್ರಮುನಿಯಾದರೆ, ಅವರ ಬಲಗೈ ಬಂಟನಾಗಿ ಜಯಸಿಂಹ ಮುಸುರಿ ಕನೆಕ್ಷನ್ ಕಾಳಪ್ಪನಾಗಿ ಕಾಣಿಸಿಕೊಳ್ಳಲಿದ್ದಾರೆ.