Advertisement

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ಮಾಜಿ ಶಾಸಕ ಈಶಣ್ಣ ಗುಳಗಣ್ಣವರ್(69) ಅವರು ಇಂದು ಗದಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

Advertisement

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈಶಣ್ಣ ಗುಳಗಣ್ಣವರ್ ಅವರನ್ನು ಗದಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ

ಈಶಣ್ಣ ಗುಳಗಣ್ಣವರ್ ಅವರು 2008 ರಲ್ಲಿ ಯಲಬುರ್ಗಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದು ಶಾಸಕರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next