ಯಳಂದೂರು: ಸಮೀಪದ ಸಂತೆಮರಹಳ್ಳಿಯಿಂದ ಕುದೇರಿಗೆ ತೆರಳುವ ರಸ್ತೆಯಲ್ಲಿ ಆಟೋ ಮಗುಚಿ ಚಾಲಕ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
Advertisement
ಮೂಡಲ ಅಗ್ರಹಾರ ಗ್ರಾಮದ ಅನಂತ್ ಕುಮಾರ್(18) ಎಂಬ ವ್ಯಕ್ತಿ ಮೃತಪಟ್ಟ ದುರ್ದೈವಿ. ಸಂತೇಮರಹಳ್ಳಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಗೆ ಬಾಳೆ ಎಲೆ ತರಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.