Advertisement

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

09:57 PM Apr 27, 2024 | Team Udayavani |

ಯಲ್ಲಾಪುರ: ಬೊಲೆರೋ ಹಾಗೂ ದ್ವಿಚಕ್ರವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ದಾರುಣ ಸಾವನ್ನಪ್ಪಿದ ಘಟನೆ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63 ರ ಪಟ್ಟಣದ ನಾಯಕನಕೆರೆ ಬಳಿ ಶನಿವಾರ ಸಂಜೆ ಸಂಭವಿಸಿದೆ.

Advertisement

ಅತಿವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡು ಬಂದ ಬೊಲೆರೋ ಬೈಕ್ ಗೆ ಢಿಕ್ಕಿ ಹೊಡೆದಿದೆ.ಸವಾರ ಸಚಿನ್ ನಾಗೇಂದ್ರ ನಾಯ್ಕ್ ಮಂಚಿಕೇರಿ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಹಿಂಬದಿ ಸವಾರ ದೀಪಕ್ ಅಮೀನ್ ಗೆ ಕೈ, ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದಲ್ಲಿ ಬೈಕ್ ಹಾಗೂ ಬೊಲೆರೋ ಜಖಂಗೊಂಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next