ಉತ್ತರ ಪ್ರದೇಶ: ಮಹಿಳೆಯರಿಗೆ ಕಿರುಕುಳ ನೀಡುವ ವ್ಯಕ್ತಿಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದರೆ, ‘ಯಮರಾಜ’ ಅವರಿಗಾಗಿಯೇ ಕಾಯುತ್ತಿದ್ದಾನೇ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ ಎಚ್ಚರಿಕೆ ಸಂದೇಶ ಕಳುಹಿಸಿದ್ದಾರೆ.
ಶುಕ್ರವಾರ ಉತ್ತರಪ್ರದೇಶದ ಅಂಬೇಡ್ಕರ್ ನಗರದಲ್ಲಿ ನಡೆದ ಬಾಲಕಿಗೆ ಕಿರುಕುಳ ಮತ್ತು ಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಯೋಗಿ ಕಿರುಕುಳ, ಅತ್ಯಾಚಾರ, ಸುಲಿಗೆ ಸೇರಿದಂತೆ ಮಹಿಳೆಯರಿಗೆ ಕಿರುಕುಳ ನೀಡುವಂತಹ ಯತ್ನಗಳು ನಡೆದರೆ ಆತನಿಗೆ ಯಮರಾಜ ಕಾಯುತ್ತಿರುತ್ತಾನೆ ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಅಂಬೇಡ್ಕರ್‌ನಗರದಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬೈಸಿಕಲ್ ನಲ್ಲಿ ತೆರಳುತ್ತಿದ್ದ ಬಾಲಕಿಯ ದುಪಟ್ಟಾ ಎಳೆದಿದ್ದರು ಈ ವೇಳೆ ಆಯತಪ್ಪಿ ರಸ್ತೆಗೆ ಬಿದ್ದ ಬಾಲಕಿಯ ಮೇಲೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬೈಕಿನ ವ್ಯಕ್ತಿ ಬಾಲಕಿಯ ಮೇಲೆ ಬೈಕ್ ಹತ್ತಿಸಿ ಹತ್ಯೆಗೈದಿದ್ದ, ಈ ಪ್ರಕರಣ ಶುಕ್ರವಾರ ನಡೆದಿದ್ದು, ಶನಿವಾರ ರಾತ್ರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಲ್ಲಿ ಇಬ್ಬರಿಗೆ ಕಾಲಿಗೆ ಗುಂಡು ತಗುಲಿದ್ದು, ಬಂಧನದಿಂದ ಪರಾರಿಯಾಗಲು ಪ್ರಯತ್ನಿಸುವಾಗ ಒಬ್ಬನ ಕಾಲು ಮುರಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಭಾನುವಾರ 343 ಕೋಟಿ ರೂ.ಗಳ 76 ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಯೋಗಿ ಆದಿತ್ಯನಾಥ್ ಇಲ್ಲೂ ಅದೇ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಯೋಗಿ ಹೆಚ್ಚಿನ ಕ್ರಮಗಳನ್ನು ಕೈಗೊಂಡಿದ್ದು ಅಲ್ಲದೆ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ: Tilapia Fish: ಮೀನು ತಿಂದು ಕೈ, ಕಾಲುಗಳನ್ನೇ ಕಳೆದುಕೊಂಡ ಮಹಿಳೆ… ಎಚ್ಚರ ಅಗತ್ಯ