ಮಂಗಳೂರು: ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್’ ತುಳು ಸಿನೆಮಾ ಶುಕ್ರವಾರ ಕರಾವಳಿಯಾದ್ಯಂತ ತೆರೆಕಂಡಿದೆ.
ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನೆಮಾಸ್, ಪಿವಿಆರ್, ಸಿನೆಪೊಲಿಸ್, ಉಡುಪಿಯಲ್ಲಿ ಕಲ್ಪನ, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನೆಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನೆಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್‌ನಲ್ಲಿ ನಟರಾಜ್, ಸಿನೆಗ್ಯಾಲಕ್ಸಿ, ಪುತ್ತೂರಿನಲ್ಲಿ ಭಾರತ್ ಸಿನೆಮಾಸ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ಏಕಕಾಲದಲ್ಲಿ ತೆರೆಕಂಡಿದ್ದು ಮೊದಲ ದಿನವೇ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ.
ಮುಂಬಯಿ ವಿ.ಕೆ. ಸಮೂಹ ಸಂಸ್ಥೆಯ ಅಧ್ಯಕ್ಷ, ಆಡಳಿತ ನಿರ್ದೇಶಕ ಕರುಣಾಕರ ಎಂ. ಶೆಟ್ಟಿ ಮಧ್ಯ ಗುತ್ತು ಅವರು ಚಿತ್ರ ಬಿಡುಗಡೆ ಕಾರ್ಯ ಕ್ರಮದಲ್ಲಿ ಮಾತನಾಡಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, “ಯಾವುದೇ ತುಳು ಸಿನೆಮಾ ಬಂದರೂ ತುಳುವರು ಸೋಲಲು ಬಿಡುವುದಿಲ್ಲ ಎಂಬ ನಂಬಿಕೆ ನಮ್ಮಲ್ಲಿದೆ’ ಎಂದರು.
ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಚಿತ್ರ ನಟ-ನಿರ್ದೇಶಕ ಡಾ| ದೇವದಾಸ್ ಕಾಪಿಕಾಡ್, ನಿರ್ದೇಶಕರಾದ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್, ಶಿವಧ್ವಜ್ ಶೆಟ್ಟಿ, ಪ್ರಮುಖರಾದ ಜಯರಾಮ ಶೇಖ, ಅಡ್ಯಾರ್ ಮಾಧವ ನಾಯ್ಕ, ಗಿರೀಶ್ ಎಂ. ಶೆಟ್ಟಿ ಕಟೀಲು, ಹರೀಶ್ ವಾಸು ಶೆಟ್ಟಿ, ಮಾನಸಿ ಸುಧೀರ್, ವಿ. ಮನೋಹರ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರ್, ದಯಾನಂದ ಶೆಟ್ಟಿ, ರಾಮ್ ಶೆಟ್ಟಿ ಮುಂಬಯಿ, ಸಂತೋಷ್ ಶೆಟ್ಟಿ, ತಮ್ಮ ಲಕ್ಷ್ಮಣ, ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ ಉಪಸ್ಥಿತರಿದ್ದರು. ಭಾಗ್ಯರಾಜ್ ಶೆಟ್ಟಿ ನಿರೂಪಿಸಿದರು.