Advertisement
ಚಿತ್ರ ನಿರ್ಮಾಪಕ ಹಾಗೂ ನಟ ದಯಾನಂದ ಶೆಟ್ಟಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಾನ್ ಸೂಪರ್ ಸ್ಟಾರ್ ಸಿನೆಮಾ ಮಂಗಳೂರಿನ ರೂಪವಾಣಿ, ಭಾರತ್ ಸಿನೆಮಾಸ್, ಪಿವಿಆರ್, ಸಿನನೆಪೊಲಿಸ್, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನೆಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನೆಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್‌ನಲ್ಲಿ ನಟರಾಜ್, ಸಿನೆಗ್ಯಾಲಕ್ಸಿ, ಪುತ್ತೂರಿನಲ್ಲಿ ಭಾರತ್ ಸಿನೆಮಾಸ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ.
ಮುಂಬಯಿ, ಪೂನಾ ಮತ್ತಿತರ ಕಡೆಗಳಲ್ಲಿ ಈಗಾಗಲೇ ಸಿನೆಮಾ ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿದೆ. ಬೆಂಗಳೂರು ಮತ್ತು ಗಲ್ಫ್ ದೇಶಗಳಲ್ಲೂ ಸಿನೆಮಾ ಬಿಡುಗಡೆಗೆ ತಯಾರಿ ನಡೆಯುತ್ತಿದೆ ಎಂದರು. ಉಡುಪಿ ಸುತ್ತಮುತ್ತ ಒಂದೇ ಹಂತದಲ್ಲಿ 25 ದಿನಗಳ ಕಾಲ ಯಾನ್ ಸೂಪರ್ ಸ್ಟಾರ್ ಚಿತ್ರೀಕರಣ ನಡೆದಿತ್ತು. ಸಂತೋಷ್ ಶೆಟ್ಟಿ ಅವರ ಕಥೆಗೆ ಸಚಿನ್ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ. ವಿ. ಮನೋಹರ್ ಸಂಗೀತ ಒದಗಿಸಿದ್ದಾರೆ ಎಂದು ಹೇಳಿದ ಅವರು, ತುಳುವಿನಲ್ಲಿ ಇದೊಂದು ವಿಭಿನ್ನ ಸಿನೆಮಾ. ಕಾಮಿಡಿ ಹಾಗೂ ಸಂದೇಶ ಭರಿತ ಸಿನೆಮಾ ಇದಾಗಿದೆ ಎಂದವರು ಹೇಳಿದರು.
Related Articles
Advertisement
ಹಿಂದಿಯ “ಸಿಐಡಿ’ ಧಾರವಾಹಿಯ ತಂಡ!ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನೆಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್‌ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು, ಮಾನಸಿ ಸುಧೀರ್, ಅನ್ ಷಾ, ಅಶೋಕ್ ಪಕ್ಕಳ, ಅತಿಶ್ ಶೆಟ್ಟಿ, ಅರುಷ್ ಯು ಪೂಜಾರಿ, ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.