Advertisement
ಅವರು ಸೋಮವಾರ ಉಡುಪಿ ಜಿ.ಪಂ., ಕರ್ನಾಟಕ ಆರೋಗ್ಯ ವ್ಯವಸ್ಥೆ ಮತ್ತು ಸುಧಾರಣೆ ಯೋಜನೆ ಆಶ್ರಯದಲ್ಲಿ 9.36 ಕೋಟಿ ರೂ. ಅನುದಾನದ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಆರೋಗ್ಯ ಇಲಾಖೆಯಲ್ಲಿ ಕಳೆದ 8 ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆ ಸಿದ್ದರಾಮಯ್ಯ ಅವರ ಸರಕಾರ ಅಧಿಕಾರಕ್ಕೆ ಬಂದ ಅನಂತರ ಚಾಲನೆ ದೊರೆತು ವಿವಿಧ ಸ್ತರದ ನೇಮಕಾತಿ ನಡೆದಿದೆ. ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆ ವಠಾರದಲ್ಲಿ ಜೆನರಿಕ್ ಔಷಧ ಕೇಂದ್ರ ತೆರೆಯಲಾಗಿದ್ದು, ಇಲ್ಲಿ ಮಾರುಕಟ್ಟೆ ಬೆಲೆಗಿಂತ ಶೇ. 90 ರಿಯಾಯಿತಿ ದರದಲ್ಲಿ ಔಷಧ ಲಭ್ಯವಾಗುತ್ತಿದೆ. ಅಲ್ಲದೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ಒದಗಿಸುವ ಚಿಂತನೆ ಇದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
Related Articles
ಬಹ್ಮಾವರದಲ್ಲಿ 30 ಹಾಸಿಗೆಗಳ ಸಾಮ ರ್ಥ್ಯದ 9.36 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಈ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸಾ ಘಟಕ, ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿ, ಎಕ್ಸ್‌ರೇ ಕೊಠಡಿ, ಲ್ಯಾಬೋ
ರೇಟರಿ ಮಾತ್ರವಲ್ಲದೆ ಸೋಲಾರ್ ಬಿಸಿ ನೀರಿನ ವ್ಯವಸ್ಥೆ, ಕೋಲ್ಡ್ ಸ್ಟೋರೇಜ್ ಹೊಂದಿರುವ ಶವಾಗಾರ, ಬೋರ್‌ವೆಲ್, ಮಳೆ ನೀರು ಇಂಗಿ ಸುವ ವ್ಯವಸ್ಥೆ ಇರಲಿದೆ. ವೈದ್ಯರು, ದಾದಿಯರು ಹಾಗೂ ಡಿ ಗ್ರೂಪ್ ಸಿಬಂದಿಗಾಗಿ 16 ವಸತಿಗೃಹ ನಿರ್ಮಾಣ ಆಗಲಿದ್ದು, 12 ತಿಂಗಳ ಅವಧಿಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.
Advertisement