Advertisement

Jangal Mangal Movie: ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

05:51 PM Oct 07, 2024 | Team Udayavani |

ಬಹುತೇಕ ನೆಗೆಟಿವ್‌ ಪಾತ್ರಗಳಲ್ಲೇ ಕಾಣಿಸಿಕೊಳ್ಳುತ್ತಿರುವ ಯಶ್‌ ಶೆಟ್ಟಿ ಈಗ ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ಅದು “ಜಂಗಲ್‌ ಮಂಗಲ್‌’ ಚಿತ್ರದ ಮೂಲಕ. ಇತ್ತೀಚೆಗೆ ಈ ಚಿತ್ರದ ಟೈಟಲ್‌ ಅನ್ನು ನಿರ್ದೇಶಕ ಸಿಂಪಲ್‌ ಸುನಿ ಬಿಡುಗಡೆ ಮಾಡಿ ಶುಭಕೋರಿದರು. ರಕ್ಷಿತ್‌ ಕುಮಾರ್‌ ಈ ಸಿನಿಮಾದ ನಿರ್ದೇಶಕರು. ಸಹ್ಯಾದ್ರಿ ಸ್ಟುಡಿಯೋಸ್‌ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

Advertisement

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರಕ್ಷಿತ್‌, “ಇದು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆ. ಅರೆ ಮಲೆನಾಡು ಎಂದರೆ ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಎರಡು ಸಂಧಿಸುವ ಊರು. ಅಲ್ಲಿ ವಿವಿಧ ಸಂಸ್ಕೃತಿಯ ಜನರು ಇರುತ್ತಾರೆ. ಅಲ್ಲೊಂದು ದಟ್ಟವಾದ ಕಾಡು. ಆ ಕಾಡಿನಲ್ಲಿ ನಡೆಯುವ ಪ್ರೇಮಕಥೆಯೂ ಈ ಚಿತ್ರದಲ್ಲಿದೆ. ಚಿತ್ರದ ಅರ್ಧಕ್ಕೂ ಹೆಚ್ಚಿನ ಭಾಗದ ಚಿತ್ರೀಕರಣ ಸುಬ್ರಹ್ಮಣ್ಯದ ಬಳಿಯ ಕಾಡಿನಲ್ಲೇ ನಡೆದಿದೆ. ಯಶ್‌ ಶೆಟ್ಟಿ ನಾಯಕನಾಗಿ, ಹರ್ಷಿತಾ ರಾಮಚಂದ್ರ ನಾಯಕಿಯಾಗಿ ನಟಿಸಿದ್ದಾರೆ ಎಂದರು.

“ನಿರ್ದೇಶಕರು ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ವಿಭಿನ್ನ ಕಥೆ ಎನ್ನಬಹುದು. ಮೊದಲು ಉಗ್ರಂ ಮಂಜು ಅವರ ಪಾತ್ರ ನಾನು ಮಾಡಬೇಕಿತ್ತು. ಆನಂತರ ಬದಲಾಗಿ ನಿರ್ದೇಶಕರು ಈ ಪಾತ್ರ ನೀಡಿದರು. ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ’ ಎನ್ನುವುದು ಯಶ್‌ ಶೆಟ್ಟಿ ಮಾತು.

ನಾಯಕಿ ಹರ್ಷಿತಾ ರಾಮಚಂದ್ರ ಮಾತನಾಡಿ, “ದಿವ್ಯ ಎಂಬ ಮಧ್ಯಮ ವರ್ಗದ ಜವಾಬ್ದಾರಿಯುತ ಕರಾವಳಿ ಹೆಣ್ಣುಮಗಳ ಪಾತ್ರ ನನ್ನದು’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next