Advertisement

ಯಶಸ್ವಿನಿ ಯೋಜನೆ ಮರು ಜಾರಿ, ನ.1 ರಿಂದ ನೋಂದಣಿ ಆರಂಭ

01:32 AM Oct 13, 2022 | Team Udayavani |

ಬೆಂಗಳೂರು: ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಸರಕಾರ ಆದೇಶಿಸಿದ್ದು , ನ. 1ರಂದು ಸದಸ್ಯರ ನೋಂದಣಿ ಆರಂಭವಾಗಲಿದೆ.

Advertisement

ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ.

ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು.

ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು.

ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next