Advertisement

ಯಶಸ್ವಿನಿ ಯೋಜನೆ ಮರು ಜಾರಿ: ನವೆಂಬರ್ 1ರಿಂದ ನೋಂದಣಿ ಪ್ರಾರಂಭ, ಮಾರ್ಗಸೂಚಿ ನಿಗದಿ

07:33 AM Oct 13, 2022 | Team Udayavani |

ಬೆಂಗಳೂರು : ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.

Advertisement

ಈ ಕುರಿತು ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು.

ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.

ಇದನ್ನೂ ಓದಿ : ಕೈಗಾ ಅಣು ವಿದ್ಯುತ್‌ ಸ್ಥಾವರ ವಿಸ್ತರಣೆಗೆ ತಡೆ; ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ

Advertisement

Udayavani is now on Telegram. Click here to join our channel and stay updated with the latest news.

Next