ನವದೆಹಲಿ: ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ವಿಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಮಂಗಳವಾರ (ಜೂನ್ 21) ಆಯ್ಕೆ ಮಾಡಿವೆ. ಬಿಜೆಪಿ ಅಭ್ಯರ್ಥಿಯ ಹೆಸರು ಇನ್ನಷ್ಟೇ ಘೋಷಣೆಯಾಗಬೇಕಾಗಿದೆ.
ಇದನ್ನೂ ಓದಿ:ಗೋವಾ ಬೀಚ್ ನಲ್ಲಿ ಪಲ್ಟಿ ಹೊಡೆಯುವಾಗ ನಟ ದಿಗಂತ್ ಕತ್ತಿಗೆ ಬಲವಾದ ಪೆಟ್ಟು
ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಮೋದಿ ಸರ್ಕಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾಮಾನ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಾವು ನಿರ್ಧರಿಸಿದ್ದೇವು. ಆ ನಿಟ್ಟಿನಲ್ಲಿ ಇಂದು ನಡೆದ ಸಭೆಯಲ್ಲಿ ನಾವು ಯಶವಂತ್ ಸಿನ್ಹಾ ಅವರನ್ನು ಸಾಮಾನ್ಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಯಶವಂತ್ ಸಿನ್ನಾ ಅವರಿಗೆ ಮತ ಚಲಾಯಿಸಬೇಕೆಂದು ಕಾಂಗ್ರೆಸ್ ನ ಸಂವಹನ ಮುಖ್ಯಸ್ಥ ಜೈರಾಮ್ ರಮೇಶ್ ತಿಳಿಸಿದ್ದಾರೆ.
ರಾಷ್ಟ್ರಪತಿ ಅಭ್ಯರ್ಥಿಯಾಗಬೇಕೆಂಬ ವಿರೋಧ ಪಕ್ಷಗಳ ಒಗ್ಗಟ್ಟಿನ ಆಹ್ವಾನದ ಮೇರೆಗೆ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇನೆ ಎಂದು ಯಶವಂತ್ ಸಿನ್ಹಾ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದರು. ಟಿಎಂಸಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇದೀಗ ಬಹುದೊಡ್ಡ ಹೊಣೆಗಾರಿಕೆಯ ಸಮಯ ಬಂದಿದ್ದು, ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕೆ ಮಮತಾ ಅವರು ಅನುಮತಿ ನೀಡುತ್ತಾರೆಂಬ ವಿಶ್ವಾಸ ಇದೆ ಎಂದು ಸಿನ್ಹಾ ಟ್ವೀಟ್ ನಲ್ಲಿ ತಿಳಿಸಿದ್ದರು.
Related Articles
ಈ ಮೊದಲು ಪಶ್ಚಿಮಬಂಗಾಲ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ, ಎನ್ ಸಿಪಿಯ ಶರದ್ ಪವಾರ್ ಹಾಗೂ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ರಾಷ್ಟ್ರಪತಿ ಅಭ್ಯರ್ಥಿಯಾಗಲು ನಿರಾಕರಿಸಿದ್ದರು.
ರಾಷ್ಟ್ರಪತಿ ಚುನಾವಣೆಗಾಗಿ ಜೂನ್ 29ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಒಂದು ವೇಳೆ ಚುನಾವಣೆ ಅಗತ್ಯವಾದರೆ, ಜುಲೈ 18ರಂದು ಮತದಾನ ನಡೆಯಲಿದೆ ಎಂದು ವರದಿ ತಿಳಿಸಿದೆ.