ನವದೆಹಲಿ: ಪ್ರತಿಪಕ್ಷಗಳು ಸೂಚಿಸಿರುವ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ಸೋಮವಾರ (ಜೂನ್ 27) ಹಲವು ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ರಾಷ್ಟ್ರಪತಿ ಚುನಾವಣೆಗೆ ಚುನಾವಣಾಧಿಕಾರಿಯಾಗಿರುವ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರಿಗೆ ನಾಲ್ಕು ಸೆಟ್ ನಾಮಪತ್ರಗಳನ್ನು ಹಸ್ತಾಂತರಿಸಿದರು.
ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ನ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಡಿಎಂಕೆಯ ಎ ರಾಜಾ, ಎನ್ಸಿ ನಾಯಕ ಫಾರೂಕ್ ಅಬ್ದುಲ್ಲಾ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ಪ್ರಮುಖ ನಾಯಕರು ಹಾಜರಿದ್ದರು.
ಈ ವೇಳೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಹಾಜರಿರಲಿಲ್ಲವಾದರೂ, ಅವರು ಮತ್ತು ಅವರ ಪಕ್ಷ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಯಶವಂತ್ ಸಿನ್ಹಾ ಅವರಿಗೆ ಬೆಂಬಲವನ್ನು ನೀಡಿದೆ.