ಹೊಸದಿಲ್ಲಿ : ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಶರದ್ ಪವಾರ್, ಫಾರೂಕ್ ಅಬ್ದುಲ್ಲಾ ಬಳಿಕ ಮಹಾತ್ಮಾ ಗಾಂಧೀಜಿಯವರ ಮೊಮ್ಮಗ, ಪಶ್ಚಿಮ ಬಂಗಾಲದ ಮಾಜಿ ರಾಜ್ಯಪಾಲರಾದ ಗೋಪಾಲಕೃಷ್ಣ ಗಾಂಧಿ ಅವರೂ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗುವ ವಿಪಕ್ಷಗಳ ಕೊಡುಗೆಯನ್ನು ತಿರಸ್ಕರಿಸಿದ್ದರು. ಹೀಗಾಗಿ ಕಳೆದ ವರ್ಷ ಟಿಎಂಸಿಗೆ ಸೇರ್ಪಡೆಯಾದ ಬಿಜೆಪಿಯ ಮಾಜಿ ನಾಯಕ ಯಶವಂತ ಸಿನ್ಹಾ ಅವರನ್ನು ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ತೃಣಮೂಲ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಮಂಗಳವಾರ ದಿಲ್ಲಿಯಲ್ಲಿ ಎನ್ಸಿಪಿ ನಾಯಕ ಶರದ್ ಪವಾರ್ ನೇತೃತ್ವದಲ್ಲಿ ವಿಪಕ್ಷಗಳ ಸಭೆ ನಡೆಯಲಿದ್ದು, ಅಲ್ಲಿ ಸಿನ್ಹಾ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದೆ.