Advertisement

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

08:30 PM Mar 28, 2024 | Team Udayavani |

ಚಾಮರಾಜನಗರ: ಮೋದಿ ಮೋದಿ ಎನ್ನುವ ಯುವಕರಿಗೆ, ವಿದ್ಯಾರ್ಥಿಗಳಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ ತಂಗಡಗಿ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೀಡಾದ ಬೆನ್ನಲ್ಲೇ, ಈಗ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ| ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಓರ್ವ ಗೂಂಡಾ, ರೌಡಿ ಎಂದು ಹೇಳಿದ್ದಾರೆ.

Advertisement

ಹನೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗುಜರಾತ್‌ನಲ್ಲಿ ನರಮೇಧ ಮಾಡಿದವರು ಯಾರು ಎಂದು ಪ್ರಶ್ನಿಸಿದರಲ್ಲದೆ, ಕ್ರಿಮಿನಲ್‌ ಚಟುವಟಿಕೆ ಹಿನ್ನೆಲೆಯುಳ್ಳ ಇವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಟೀಕಿಸಿದರು. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರಕಾರ ಅಂದರೆ ಅದು ನರೇಂದ್ರ ಮೋದಿ ಸರಕಾರ ಎಂದು ವಾಗ್ಧಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next