Advertisement

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

09:59 AM Jul 03, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರ ಜುಲೈ 2 ರಂದು ಹಲವು ಪೊಲೀಸ್ ಅಧಿಕಾರಿಗಳನ್ನು(IPS) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Advertisement

ಸರಕಾರದ ಆದೇಶದ ಪ್ರಕಾರ, ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನೇಮಿಸಲಾಗಿದೆ. ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್‌ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕ ಲಾಭು ರಾಮ್ ಅವರನ್ನು ಬೆಂಗಳೂರಿನ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.

Inspector General of Police, Central Range ಡಾ.ಬಿ.ಆರ್. ರವಿಕಾಂತೇಗೌಡ ಅವರನ್ನು Inspector General of Police, Headquarters-1ಗೆ ವರ್ಗಾವಣೆ ಮಾಡಲಾಗಿದೆ.

Advertisement

ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ.

ಮೈಸೂರು ನಗರ ಪೊಲೀಸ್ ಕಮಿಷನರ್ ಬಿ.ರಮೇಶ್ ಅವರನ್ನು ಉಪ ಪೊಲೀಸ್ ಮಹಾನಿರೀಕ್ಷಕರು, ಪೂರ್ವ ವಲಯ, ದಾವಣಗೆರೆಗೆ ವರ್ಗಾವಣೆ ಮಾಡಲಾಗಿದೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಬೆಂಗಳೂರು ನಗರ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿ.ಕೆ.ಬಾಬಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next