Advertisement

Basangouda Patil Yatnal ಪ್ರತಿಭಟನೆ: ಬಿಜೆಪಿ ನಾಯಕರ ಸಾಥ್‌ ;ಬಗೆಹರಿಯದ ಬಿಕ್ಕಟ್ಟು

12:38 AM Aug 29, 2024 | Team Udayavani |

ಬೆಂಗಳೂರು: ಕಲಬುರಗಿ ಜಿಲ್ಲೆಯ ಸಿದ್ಧಸಿರಿ ಸಕ್ಕರೆ ಕಾರ್ಖಾನೆಯ ಮರು ಆರಂಭಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ನಡೆಸುತ್ತಿರುವ ಹೋರಾಟ ಬುಧವಾರವೂ ಮುಂದುವರಿದಿದ್ದು,ಕಾಂಗ್ರೆಸ್‌ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ನೀಡಿದರು.

Advertisement

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯಲ್ಲಿ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲ್ಲಿನ ಅಧಿಕಾರಿಗಳು ಸ್ಥಳಕ್ಕೆ ಬಾರದೆ ವಿಧಾನಸೌಧದ ಕಡೆಗೆ ಮುಖ ಮಾಡಿ ಕೊಂಡು ಕೂತಿದ್ದಾರೆ.

ಸರಕಾರದ ನಿರ್ದೇಶನದ ಅನ್ವಯ ಈ ರೀತಿ ಸತಾಯಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳಿಗೆ ಮೇಲಿನಿಂದ ಫೋನ್‌ ಕರೆ ಬಂದಿದ್ದು ಯತ್ನಾಳ್‌ ಅವರಿಗೆ ತೊಂದರೆ ಕೊಡಲು ಸೂಚಿಸಲಾಗಿದೆ. ಮಂಡಳಿಯ ಅಧ್ಯಕ್ಷರು ಸ್ಥಳಕ್ಕೆ ಬಾರದೆ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಹೈಕೋರ್ಟ್‌ ಆದೇಶವನ್ನು ಜಾರಿ ಮಾಡುವುದಿಲ್ಲ ಎಂದು ಲಿಖಿತವಾಗಿ ಕೊಡಲಿ ಎಂದು ಆಗ್ರಹಿಸಿದರು.

ಯತ್ನಾಳ್‌ ಮುಗಿಸುವ ಯತ್ನ
ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕಬ್ಬಿನ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದರು.

ವಿಜಯೇಂದ್ರ ಟ್ವೀಟ್‌
ನ್ಯಾಯಾಲಯದ ಆದೇಶವಿದ್ದರೂ ಸಕ್ಕರೆ ಕಾರ್ಖಾನೆ ತೆರೆಯಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅನುವು ಮಾಡಿಕೊಡದೆ ಉಪಟಳ ನೀಡುತ್ತಿರುವುದನ್ನು ಖಂಡಿಸಿ ಕಾರ್ಖಾನೆಯ ಅಧ್ಯಕ್ಷ ಹಾಗೂ ಪಕ್ಷದ ಹಿರಿಯ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಪ್ರಶ್ನಿಸುತ್ತಿರುವ ಕ್ರಮ ನ್ಯಾಯೋಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್‌ ಮಾಡಿ ಒತ್ತಾಯಿಸಿದ್ದಾರೆ.

Advertisement

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಲು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಿರ್ಧರಿಸಿದ್ದಾರೆ. ಸಂಪುಟದ ಹಿರಿಯ ಸಚಿವರೊಬ್ಬರು ಪರವಾನಗಿ ನೀಡದಂತೆ ಒತ್ತಡ ಹೇರಿರುವುದರಿಂದ ವಿವಾದ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.

ಯತ್ನಾಳ್‌ಗೆ ಸಿಎಂ ಕರೆ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡೆಸುತ್ತಿರುವ ಪ್ರತಿಭಟನೆ ಕೈಬಿಡುವಂತೆ ಬುಧವಾರ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆ ವೇಳೆ ಸಕ್ಕರೆ ಕಾರ್ಖಾನೆ ಆರಂಭಿಸಲು ಅನುಮತಿ ನೀಡದ್ದಕ್ಕೆ ಪ್ರತಿಭಟನೆ ಮಾಡುತ್ತಿರುವುದಾಗಿ ಯತ್ನಾಳ್‌ ಹೇಳಿದಾಗ, ಪ್ರತಿಭಟನೆ ಕೈಬಿಡುವಂತೆ ಯತ್ನಾಳ್‌ಗೆ ಸಿದ್ದರಾಮಯ್ಯ ತಿಳಿಸಿದ್ದಾರೆ. ಏನಾದರೂ ಸಮಸ್ಯೆ ಇದ್ದರೆ ಕಾನೂನಾತ್ಮಕವಾಗಿ ಬಗೆಹರಿಸೋಣ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.

ಹೈಕೋರ್ಟ್‌ ತೀರ್ಪು ಪರಶೀಲಿಸಿ ಕಾಲಮಿತಿ ಒಳಗೆ ಕ್ರಮ ವಹಿಸಲಾಗುವುದು. ಸಿದ್ದಸಿರಿ ಕಾರ್ಖಾನೆ ಈ ಹಿಂದೆ ಅನುಮತಿ ಇಲ್ಲದೆ ಬಾಯ್ಲರ್‌ ಸ್ಥಾಪಿಸಿದ್ದು ತ್ಯಾಜ್ಯ ನಿರ್ವಹಣ ಘಟಕ ನಿರ್ಮಾಣ ಹಂತದಲ್ಲಿದ್ದರೂ ನಿಯಮ ಉಲ್ಲಂ ಸಿ ಲಕ್ಷಾಂತರ ಟನ್‌ ಕಬ್ಬು ಅರೆದಿತ್ತು. ಹೀಗಾಗಿ ಮಂಡಳಿ ನಿಯಮ ಅನುಸಾರ ಕ್ರಮವಹಿಸಿತ್ತು.
-ಈಶ್ವರ ಖಂಡ್ರೆ, ಅರಣ್ಯ ಮತ್ತು ಪರಿಸರ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next