Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಯ್ಕೆಯ ವೇಳೆ ಅನೇಕರಿದ್ದರು. ಎಲ್ಲಾ ಶಾಸಕರು ಉಪಸ್ಥಿತಿರಿದ್ದರು. ಯಾರನ್ನೂ ಮರೆಮಾಚಿ ಸಿಎಂ ಆಯ್ಕೆ ಮಾಡಿಲ್ಲ. ಕೆಲವರು ಸಂತೆ ಮಾತನಾಡುತ್ತಾರೆ. ಬೇರೆ ಪಕ್ಷದವರ ದಾರಿ ತಪ್ಪಿಸಲು ಈ ರೀತಿ ಹೇಳಿರಬಹುದು ಎಂದರು.
Related Articles
Advertisement
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿ.ಟಿ.ರವಿ, ಊಹಾಪೋಹಕ್ಕೆ ಬೆಲೆ ಕೊಡುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪೂರ್ಣಿಮಾ, ಅಶೋಕ್ ಎಲ್ಲರೂ ಸರ್ವಾನುಮತ ಪಡೆದು ಸಿಎಂ ಮಾಡಲಾಗಿದೆ. ಮಾಧ್ಯಮದಲ್ಲಿ ಬೆಂಕಿ ಇಲ್ಲದೆ ಒಮ್ಮೊಮ್ಮೆ ಹೊಗೆ ಆಡಲಿದೆ. ಸಮಾಲೋಚನೆ ಮಾಡುವುದು ಸ್ವಾಭಾವಿಕ ಎಂದರು.
ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತನಿಖೆ ಹಂತದಲ್ಲಿ ಯಾರು ನಿರಪರಾಧಿ ಎಂದೂ ಹೇಳಲ್ಲ, ತಪ್ಪಿತಸ್ತರು ಎಂದಲೂ ಹೇಳಲ್ಲ. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಎಲ್ಲವೂ ಹೊರಗೆ ಬರಲಿ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ತಪ್ಪಿತಸ್ತರಿಗೆ ಶಿಕ್ಷೆ ಆಗಲಿದೆ ಎಂದರು.
ಮಂಡ್ಯದಲ್ಲಿ ಯುವ ನಾಯಕತ್ವ ವಿಚಾರವಾಗಿ ಮಾತನಾಡಿ, ಮಂಡ್ಯ ಗೆಲ್ಲದೆ ಬಿಜೆಪಿಗೆ ಗೆಲುವೇ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಮಂಡ್ಯವನ್ನು ಬಿಜೆಪಿ ಭದ್ರಕೋಟೆ ಮಾಡಿಕೊಳ್ಳಲಿದ್ದೇವೆ ಎಂದರು.