ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 24 ತಾಸಿನೊಳಗೆ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಯ ಎಲ್ಲ ಸ್ಥಾನಮಾನಗಳನ್ನು ನೀಡಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಗಡುವು ನೀಡಿದರು.
ನಗರದಲ್ಲಿ ಗಾಂಧಿ ಭವನದಲ್ಲಿ ಗುರುವಾರ ನಡೆದ ಪಂಚಮಸಾಲಿ ಸಮಾಜಕ್ಕೆ 2ಡಿ ಪಂಚಮಸಾಲಿಗಳ ಸಿಕ್ಕ ನ್ಯಾಯವೋ ಅನ್ಯಾಯವೋ? ಎಂಬ ಕುರಿತ ರಾಜ್ಯ ಕಾರ್ಯಕಾರಿಣಿ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
24 ಗಂಟೆಯೊಳಗೆ ಮೀಸಲಾತಿ ಕಲ್ಪಿಸದಿದ್ದರೆ ಮುಖ್ಯಮಂತ್ರಿಗಳು ಸ್ಪರ್ಧಿಸುವ ಹಾವೇರಿ ಜಿಲ್ಲೆ ಶಿಗ್ಗಾಂವ ಕ್ಷೇತ್ರದಿಂದ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಪ್ರಗತಿ ಪರಿಶೀಲಿಸಿದ ಸಚಿವ ಗಡ್ಕರಿ;262 ಕಿ.ಮೀ ಉದ್ದ, 17 ಸಾವಿರ ಕೋಟಿ ವೆಚ್ಚ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ, ಮೀಸಲಾತಿ ನೀಡುವ ಮುಖ್ಯಮಂತ್ರಿಗಳು ತಮ್ಮ ತಾಯಿಯ ಮೇಲೆ ಆಣೆ ಮಾಡಿದ್ದರು. ಮುಖ್ಯಮಂತ್ರಿ ಆದಾಗಿನಿಂದ ಇಲ್ಲಿಯವರೆಗೆ ಹಾದಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಯಡಿಯೂರಪ್ಪ ಅವರ ಮಾತು ಕೇಳಿ ನಮಗೆ ಮೋಸ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಭವಿಷ್ಯ ನಿರ್ಧರಿಸುವ ಅಂತಿಮ ಹೋರಾಟ ಇದಾಗಲಿದೆ ಎಂದು ಎಚ್ಚರಿಕೆ ನೀಡಿದರು.