Advertisement
ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕಾದರೆ ಉತ್ತರ ಕರ್ನಾಟಕದಲ್ಲಿ ಉತ್ತಮ ಸಾಧನೆ ತೋರಬೇಕು ಎಂದು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮದೇ ಯತ್ನಕ್ಕೆ ಮುಂದಾಗಿವೆ. ಪ್ರಧಾನಿ, ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಕೇಂದ್ರ-ರಾಜ್ಯಗಳ ಸಚಿವರುಗಳು, ಪಕ್ಷದ ನಾಯಕರು ಉತ್ತರಮುಖೀಯಾಗಿದ್ದಾರೆ. ವಿವಿಧ ಅಭಿವೃದ್ಧಿ, ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸೌಲಭ್ಯ, ಹಕ್ಕುಪತ್ರ ವಿತರಣೆ, ಸರಕಾರದ ವಿರುದ್ಧ ಆರೋಪ, ಜನಾಕ್ರೋಶ , ಪ್ರಜಾಧ್ವನಿ, ಪಂಚರತ್ನ ಹೀಗೆ ವಿವಿಧ ಹೆಸರಲ್ಲಿ ಸಮಾವೇಶ, ಯಾತ್ರೆಗಳ ಮೆರವಣಿಗೆ ಜೋರಾಗಿಯೇ ಸದ್ದು ಮಾಡತೊಡಗಿದೆ.
Related Articles
Advertisement
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಸಚಿವರುಗಳು ಈಗಾಗಲೇ ಜನಸಂಕಲ್ಪ ಯಾತ್ರೆ, ವಿವಿಧ ಸೌಲಭ್ಯಗಳ ನೀಡಿಕೆ, ಹಕ್ಕುಪತ್ರಗಳ ವಿತರಣೆ, ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಸಮಾರಂಭ, ರೈತ, ಕಾರ್ಮಿಕರು, ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಮೋರ್ಚಾ ಸಮಾವೇಶಗಳನ್ನು ಕೈಗೊಳ್ಳುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ಯತ್ನ ತೋರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ರಾಜ್ಯಕ್ಕೆ ಆಗಮಿಸಿ ಚುನಾವಣಾ ಕಾರ್ಯತಂತ್ರದ ಪಾಠ ಮಾಡಿದ್ದು, ಪಕ್ಷದ ನಾಯಕರು, ಪದಾಧಿಕಾರಿಗಳಿಗೆ ಟಾಸ್ಕ್ಗಳನ್ನು ನೀಡಿದ್ದಾರೆ. ಜ.26ರಂದು ಹುಬ್ಬಳ್ಳಿಯಲ್ಲಿ ನಡೆಯುವ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ಅಮೃತಮಹೋತ್ಸವಕ್ಕೆ ಚಾಲನೆ ನೀಡಲು ಆಗಮಿಸುತ್ತಿದ್ದು, ಕಾಂಗ್ರೆಸ್‌ನಿಂದ ಟೀಕಾಸ್ತ್ರಗಳ ಪ್ರಯೋಗ: ವಿಪಕ್ಷ ಕಾಂಗ್ರೆಸ್ ಮತದಾರರ ಮೇಲೆ ಪ್ರಭಾವ ಬೀರುವ ನಿಟ್ಟನಲ್ಲಿ ಜನಾಕ್ರೋಶ, ಪ್ರಜಾಧ್ವನಿ ವಿವಿಧ ಹೆಸರಿನಲ್ಲಿ ಸಮಾವೇಶಗಳ ಮೂಲಕ ಬಿಜೆಪಿ ಆಡಳಿತ ವೈಫಲ್ಯಗಳ ವಿರುದ್ಧ ಟೀಕಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಪ್ರಮುಖ ವಿಷಯ, ಸಮಸ್ಯೆಗಳನ್ನು ಹಿಡಿದುಕೊಂಡು ಜನರ ಗಮನ ಸೆಳೆಯಲು ಮುಂದಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ಅನೇಕ ನಾಯಕರು ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ವಿಷಯಗಳಾದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಮಹಾದಾಯಿ, ತುಂಗಭದ್ರಾ ಸಮಾನಾಂತರ ಜಲಾಶಯ, ಕಾರಂಜಾ ಇನ್ನಿತರ ನೀರಾವರಿ ಯೋಜನೆಗಳ ವಿಷಯವಾಗಿಯೇ ಸಮಾವೇಶ ಕೈಗೊಂಡಿದೆ. ಮತ್ತೂಂದು ಕಡೆ ಮಹಾದಾಯಿ ವಿಷಯವಾಗಿ ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಸುವ ಮೂಲಕ ಕೇಂದ್ರ-ರಾಜ್ಯ ಸರಕಾರಗಳು ಡಿಪಿಆರ್‌ಗೆ ಅನುಮೋದನೆ ಎಂಬ ಕಣ್ಣೊರೆಸುವ ತಂತ್ರಕ್ಕೆ ಮುಂದಾಗಿವೆ ಎಂದು ಆರೋಪಿಸಿದೆ. ಕಲಬುರಗಿ, ವಿಜಯಪುರ, ರಾಯಚೂರು, ಬಳ್ಳಾರಿ, ಕೊಪ್ಪಳ, ಗದಗ, ಹಾವೇರಿ ಇನ್ನಿತರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸಮಾವೇಶ ನಡೆಸುವ ಮೂಲಕ ಬಿಜೆಪಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನಕ್ಕೆ ಮುಂದಾಗಿದೆ.
ಜೆಡಿಎಸ್‌ನ ಪಂಚರತ್ನ ಯಾತ್ರೆಜೆಡಿಎಸ್ ಕೂಡ ಯಾತ್ರೆ, ಸಮಾವೇಶ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಆರಂಭಿಸಿರುವ ಪಂಚರತ್ನ ಯಾತ್ರೆ ಇದೀಗ ಉತ್ತರ ಕರ್ನಾಟಕ ಪ್ರವೇಶಿಸಿದೆ. ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಬಳ್ಳಾರಿ ಇನ್ನಿತರ ಕಡೆಗಳಲ್ಲಿ ಪಂಚರತ್ನ ಯಾತ್ರೆ ಕೈಗೊಂಡಿದ್ದು, ಬಿಜೆಪಿ-ಕಾಂಗ್ರೆಸ್‌ಗಳ ವಿರುದ್ಧದ ಟೀಕಾಸ್ತ್ರಗಳ ಜತೆಗೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಪೂರ್ಣ ಮನ್ನಾ ಸಹಿತ ವಿವಿಧ ಸೌಲಭ್ಯಗಳ ನೀಡಿಕೆ ಭರವಸೆ ನೀಡುತ್ತಿದ್ದಾರೆ. ಉತ್ತರದಲ್ಲಿ ಕೆಲವು ಕ್ಷೇತ್ರಗಳನ್ನು ಹೊರತುಪಡಿಸಿದರೆ ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಕಾರ್ಯಕರ್ತರು ಹಾಗೂ ನಾಯಕರ ಕೊರತೆ ಕಾಡುತ್ತಿದ್ದು, ಅದನ್ನು ಸರಿದೂಗಿಸುವ ನಿಟ್ಟಿನಲ್ಲಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಮ್ಮದೇ ಯತ್ನದಲ್ಲಿ ತೊಡಗಿದ್ದಾರೆ. ಆಮ್‌ಆದ್ಮಿ ಪಕ್ಷ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ರಾಜ್ಯಕ್ಕೆ ಅದರಲ್ಲೂ ಉತ್ತರ ಕರ್ನಾಟಕಕ್ಕೆ ಕರೆತರುವ ಯತ್ನ ನಡೆಸಿದೆ. ಅಮರೇಗೌಡ ಗೋನವಾರ