Advertisement

‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ

11:35 AM Jun 08, 2023 | Team Udayavani |

ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ ಯಾವ ಮೋಹನ ಮುರಳಿ ಕರೆಯಿತು ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ.

Advertisement

ಇತ್ತೀಚಿಗೆ “ಯಾವ ಮೋಹನ ಮುರಳಿ ಕರೆಯಿತು’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್‌ ಟೀಸರ್‌ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.

ಯಾವ ಮೋಹನ ಮುರಳಿ ಕರೆಯಿತು ಮನುಷ್ಯ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರ. ಭರವಸೆಯ ಹುಡುಕಾಟದಲ್ಲಿರುವ ಅಂಗವಿಕಲ ಹುಡುಗಿಗೆ ಪ್ರೀತಿ ಅರಸಿ ಹೊರಟಿರುವ ಶ್ವಾನ ಸಿಗುತ್ತದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯವಿರುತ್ತದೆ. ಆ ಸಮಯದಲ್ಲಿ ಇವರಿಬ್ಬರ ನಡುವೆ ಮತ್ತೂಬ್ಬ ವ್ಯಕ್ತಿ ಪ್ರವೇಶಿಸುತ್ತಾನೆ. ನಂತರ ಏನಾಗುತ್ತದೆ ಎಂಬುದೇ ಚಿತ್ರದ ಕಥೆ. ಈಗಾಗಲೇ ಚಿತ್ರೀಕರಣ ಮುಗಿದು ಬಿಡುಗಡೆಗೆ ಸಿದ್ಧವಾಗಿದೆ. ಮೂರು ಹಾಡು ಗಳಿವೆ. ಸದ್ಯದಲ್ಲೇ ಟ್ರೇಲರ್‌ ಬರಲಿದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರವೆಂದರು ನಿರ್ದೇಶಕ ವಿಶ್ವಾಸ್‌ ಕೃಷ್ಣ.

ನಾನು ಉದ್ಯಮಿ. ಕಿಕ್‌ ಬಾಕ್ಸಿಂಗ್‌ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದೇನೆ. ಸಿನಿಮಾ ಬಗ್ಗೆ ಅಷ್ಟು ಗೊತ್ತಿಲ್ಲ. ಸಾಹಿತಿ ಗೌಸ್‌ ಫೀರ್‌ ಅವರ ಮೂಲಕ ನಿರ್ದೇಶಕರ ಪರಿಚಯವಾಯಿತು. ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದರು. ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ, ನಾಯಕಿ ಸ್ವಪ್ನಾ ಶೆಟ್ಟಿಗಾರ್‌, ಪಟೇಲ್‌ ವರುಣ್‌ ರಾಜ್‌ ಹಾಗೂ ಸಂಗೀತ ನಿರ್ದೇಶಕ ಅನಿಲ್‌ ಸಿ.ಜೆ ಚಿತ್ರದ ಕುರಿತು ಮಾತನಾಡಿದರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next