Advertisement

Karnataka: ವರ್ಷಪೂರ್ತಿ ಕನ್ನಡ ಸಂಭ್ರಮ ಕಾರ್ಯಕ್ರಮ

12:12 AM Oct 05, 2023 | Team Udayavani |

ಬೆಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ‘ ಎಂಬ ಹೆಸರಿನಲ್ಲಿ ನ. 1ರಿಂದ 2024ರ ನವೆಂಬರ್‌ವರೆಗೆ ಕರ್ನಾಟಕ ಸಂಭ್ರಮ ಆಚರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Advertisement

ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯ ಕ್ರಮವನ್ನು ವರ್ಷಪೂರ್ತಿ ನಡೆಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳ ಬೇಕು. ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ಚು ಬಿಂಬಿತ ವಾಗಬೇಕು. ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೆ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮ ಆಯೋಜಿಸಿ ಎಂದು ಸೂಚನೆ ನೀಡಿದ್ದಾರೆ.

ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ. ಕರ್ನಾಟಕ ಸಂಭ್ರಮ -50 ಕಾರ್ಯಕ್ರಮದ ಲಾಂಛನವನ್ನು ಅ. 17ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next