Advertisement

ರೈತ ಆತ್ಮಹತ್ಯೆ: 3 ಪ್ರಕರಣ ಪರಿಹಾರಕ್ಕೆ ಒಪ್ಪಿಗೆ

03:15 PM Nov 20, 2020 | Suhan S |

ಯಾದಗಿರಿ: ರೈತ ಆತ್ಮಹತ್ಯೆ ಪ್ರಕರಣಗಳ ಪರಿಶೀಲನೆ ನಡೆಸಿ ಸಂಬಂಧಿಸಿದವರ ಕುಟುಂಬದ ಸದಸ್ಯರಿಗೆ ಆದಷ್ಟು ಶೀಘ್ರ ಪರಿಹಾರದ ಮೊತ್ತವನ್ನು ಪಾವತಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್‌ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

Advertisement

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತ ಆತ್ಮಹತ್ಯೆ ಪ್ರಕರಣಗಳ ಪರಿಹಾರಕ್ಕೆ ಅನುಮತಿ ನೀಡುವ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ರೈತ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾದ ಕಾರಣ, ಮರಣೋತ್ತರ ವರದಿ, ಎಫ್‌ಎಸ್‌ಎಲ್‌ ವರದಿ, ಅವರು ಬ್ಯಾಂಕುಗಳಲ್ಲಿ ಮಾಡಿಕೊಂಡ ಸಾಲದ ವಿವರಗಳು ಸೇರಿದಂತೆ ಸರ್ಕಾರಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ವರದಿ ಸಂಗ್ರಹಿಸಿ ನೈಜ ಕಾರಣವನ್ನು ಪತ್ತೆ ಹಚ್ಚಬೇಕು, ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಕೂಡಲೇ ಪರಿಹಾರ ಧನ ವಿತರಿಸಬೇಕು, ಇಲ್ಲಿ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ದೇವಿಕಾ ಅವರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ರೈತಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ವಿವರ ನೀಡಿ, ಆತ್ಮಹತ್ಯೆಯ ಮೂರು ಪ್ರಕರಣಗಳಲ್ಲಿ ಪರಿಹಾರ ನೀಡುವ ಕುರಿತು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಸಮಿತಿಗೆ ಮಂಡಿಸಲಾಗಿದೆ. ಉಳಿದಂತೆ ಸಹಾಯಕ ಆಯುಕ್ತರ ಅಧ್ಯಕ್ಷತೆಯ ಸಮಿತಿಯಲ್ಲಿ 5 ಪ್ರಕರಣಗಳು ಇತ್ಯರ್ಥವಾಗಿದ್ದು, ಅವರಿಗೆ ಪರಿಹಾರ ಧನ ವಿತರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮೂರು ಪ್ರಕರಣಗಳನ್ನು ಸಮಗ್ರವಾಗಿ ಪರಿಶೀಲಿಸಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಮಂಜೂರು ಮಾಡಲು ಸಮ್ಮತಿ ನೀಡಿದರು. ಸಹಾಯಕ ಆಯುಕ್ತರಾದ ಶಂಕರ ಸೋಮನಾಳ್‌, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ದೇವಿಕಾ, ಸಹಾಯಕ ನಿರ್ದೇಶಕರು, ಪೊಲೀಸ್‌ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next