ಯಾದಗಿರಿ: ಜಿಲ್ಲೆಯಲ್ಲಿ ಮೃತಪಡುವ ಗರ್ಭಿಣಿಯ ದೇಹವನ್ನು ಇನ್ನೂ ಮುಂದೆ ಕಡ್ಡಾಯವಾಗಿ ಮರಣೋತ್ತರಪರೀಕ್ಷೆ ನಡೆಸಿ, ಮರಣಕ್ಕೀಡಾಗುವನಿಖರ ಕಾರಣ ಪತ್ತೆ ಹಚ್ಚುವಂತೆ ಡಿಸಿಡಾ| ರಾಗಪ್ರಿಯ ಆರ್. ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಹಾಗೂ ಎಲ್ಲ ತಾಲೂಕುಗಳ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 2020ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ವಿವಿಧ ನ್ಯೂನತೆಗಳು ಹಾಗೂ ವಿವಿಧ ಕಾರಣಗಳಿಂದ ಹತ್ತು ಗರ್ಭಿಣಿಯರು ಮೃತಪಟ್ಟಿದ್ದಾರೆ, ಅವರು ಮೃತಪಡಲು ನಿಖರ ಕಾರಣಗಳೇನು ಎಂಬುದನ್ನು ತಿಳಿಯಬೇಕಿದೆ. ಸರ್ಕಾರಿ ಮತ್ತು ಖಾಸಗಿ ಅಸ್ವತ್ರೆಗಳಲ್ಲಿ ಗರ್ಭಿಣಿ ರೋಗಿ ಹಾಗೂ ಹೊರರೋಗಿಗಳ ಸಂಪೂರ್ಣ ಮಾಹಿತಿ ಕಂಪ್ಯೂಟರ್ ಮತ್ತು ಅಸ್ವತ್ರೆ ಮಾಹಿತಿ ಪುಸ್ತಕಗಳಲ್ಲಿ ವರದಿ ಮಾಡುವಂತೆ ಸೂಚಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರಕ್ತದಾನ ಶಿಬಿರ ಏರ್ಪಡಿಸಬೇಕು. ಶಿಬಿರಗಳಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಲು ಅಗತ್ಯ ಪ್ರಚಾರ ಕೈಗೊಳ್ಳಬೇಕೆಂದು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆ ಎಲ್ಲ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಎಲ್ಲ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಒದಗಿಸಬೇಕು. ಜಿಲ್ಲೆಯಲ್ಲಿ ಗರ್ಭಿಣಿಯರ ಮರಣ ಪ್ರಮಾಣ ಕಡಿಮೆ ಮಾಡಲು ಎಲ್ಲ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರುಶ್ರಮಿಸಬೇಕು ಎಂದರು. ಜಿಲ್ಲೆಯ ಕೆಲವು ಕುಟುಂಬಗಳಲ್ಲಿ ಮೂರು ಮತ್ತು ನಾಲ್ಕು ಮಕ್ಕಳಿಗಿಂತಲೂ ಹೆಚ್ಚಿನ ಮಕ್ಕಳಿದ್ದು, ಆ ಕುಟುಂಬದವರಿಗೆ ಕುಟುಂಬ ಕಲ್ಯಾಣ ಯೋಜನೆಗಳ ಕುರಿತು ಆರೋಗ್ಯ ಅಧಿಕಾರಿಗಳು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅರಿವು ಮೂಡಿಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.