Advertisement

ಎಫ್ಐಆರ್‌ ವಿರುದಟಛಿ ಯಡಿಯೂರಪ್ಪ ಅರ್ಜಿ

08:30 AM Aug 22, 2017 | Team Udayavani |

ಬೆಂಗಳೂರು: ಎಸಿಬಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಖಾಸಗಿ ದೂರು ಹಾಗೂ ತಮ್ಮ ವಿರುದ್ಧದ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಬಿ.ಎಸ್‌. ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಶಿವರಾಮ ಕಾರಂತ ಬಡಾವಣೆಗಾಗಿ ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದಟಛಿ ಎಸಿಬಿಯಲ್ಲಿ ಖಾಸಗಿ ದೂರು ದಾಖಲಾಗಿದೆ. ಇದರ ಆಧಾರದಲ್ಲಿ 2ನೇ ಎಫ್ಐಆರ್‌ ಹಾಕಲಾಗಿದೆ. ಆದರೆ ಶಿವರಾಮ ಕಾರಂತ ಬಡಾವಣೆಯ ಪ್ರಾಥಮಿಕ ಅಧಿಸೂಚನೆಯನ್ನು ಈ ಹಿಂದೆಯೇ ಹೈಕೋರ್ಟ್‌ ರದ್ದುಪಡಿಸಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಆರೋಪಿತ ಪ್ರಕರಣದಲ್ಲಿ ಅಂತಿಮ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಹೀಗಿರುವಾಗ ಡಿನೋಟಿಫೈ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಜತೆಗೆ ವಶಪಡಿಸಿಕೊಂಡಿದ್ದ ಭೂಮಿಯನ್ನು ಕಾನೂನು ಪ್ರಕಾರವೇ ಮೂಲ
ಭೂಮಾಲೀಕರಿಗೆ ಹಿಂದಿರುಗಿಸಲಾಗಿದೆ. ಹೀಗಿರುವಾಗ ಅಕ್ರಮವೆಸಗಲು ಹೇಗೆ ಸಾಧ್ಯ? ದೂರುದಾರ ಡಾ.ಡಿ.ಅಯ್ಯಪ್ಪ ಅವರು ಭೂಮಾಲೀಕರೂ ಅಲ್ಲ. ಅವರು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿರುವ
ಜಮೀನಿಗೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ ತಮ್ಮ ವಿರುದಟಛಿ ದೂರುದಾರ ಅಯ್ಯಪ್ಪ ದಾಖಲಿಸಿರುವ ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಯ್ಯಪ್ಪ ದಾಖಲಿಸಿರುವ ಒಂದೇ ಖಾಸಗಿ ದೂರನ್ನು ಆಧರಿಸಿ ಎರಡು ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಎಫ್ಐಆರ್‌ಗಳನ್ನು ದಾಖಲಿಸುವ ಸಾಧ್ಯತೆ ಇದೆ. ಹೀಗಾಗಿ ತಮ್ಮ ವಿರುದಟಛಿದ ಎಫ್
ಐಆರ್‌ಗಳನ್ನು ರದ್ದುಪಡಿಸಬೇಕು ಹಾಗೂ ಅರ್ಜಿ ಇತ್ಯರ್ಥವಾಗುವವರೆಗೆ ತಮ್ಮ ವಿರುದಟಛಿದ ಪ್ರಕರಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಎಫ್ಐಆರ್‌ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಎರಡೂ ಅರ್ಜಿಗಳು ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಅವರಿದ್ದ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬರಲಿವೆ.

Advertisement

Udayavani is now on Telegram. Click here to join our channel and stay updated with the latest news.

Next