ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನಲ್ಲಿ ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ವೇಳೆ ಭೂ ಮಾಲೀಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಡಿನೋಟಿಫಿಕೇಶನ್ ಮಾಡಿರುವ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ, ಈ ಸಂಬಂಧ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿದೆ.
ಎಸಿಬಿ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಶನಿವಾರ ಪ್ರಕರಣಗಳ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಖುದ್ದು ಯಡಿಯೂರಪ್ಪ ಹಾಗೂ ಇತರೆ ಆರೋಪಿತ ಅಧಿಕಾರಿಗಳು ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಎರಡನೇ ಎಫ್ಐಆರ್‌ನಲ್ಲೇನಿದೆ?: ಡಾ.ಶಿವರಾಮ ಕಾರಂತ ಬಡಾವಣೆಗೆ ಸ್ವಾಧೀನ ಪಡಿಸಿಕೊಂಡಿದ್ದ ಯಶವಂತಪುರ ಹೋಬಳಿ ಸೋಮಶೆಟ್ಟಿ ಗ್ರಾಮದ ಸರ್ವೇ ನಂಬರ್ 22/2ರಲ್ಲಿರುವ 18ಗುಂಟೆ ಹಾಗೂ ಸರ್ವೇ ನಂಬರ್ 24/ 1 ಎಕರೆ 8 ಗುಂಟೆ ಜಮೀನನ್ನು ಭೂ ಮಾಲೀಕರ ಕೋರಿಕೆಯಂತೆ, ಡಿನೋಟಿಫೈ ಸಮಿತಿಯ ಅಭಿಪ್ರಾಯವನ್ನೂ ಪಡೆಯದೆ ಈ ಭೂಮಿಯನ್ನು ಭೂ ಸ್ವಾಧೀನ ಪಡಿಸಿಕೊಳ್ಳುವ ಕ್ರಮದಿಂದ ಹಿಂದೆ ಸರಿದು, ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಭೂ ಮಾಲೀಕರಿಗೆ ಅನುಕೂಲವಾಗುವಂತೆ ಡಿನೋಟಿಫಿಕೇಶನ್ ಮಾಡಿ ಕೊಟ್ಟು ಬಿಡಿಎಗೆ ನಷ್ಟವುಂಟು ಮಾಡಿದ್ದಾರೆಂಬ ಆರೋಪದ ಅನ್ವಯ ಎಫ್ಐಆರ್ ದಾಖಲಿಸಕೊಳ್ಳಲಾಗಿದೆ.
ಈ ಅಕ್ರಮಕ್ಕೆ ಸಹಕರಿಸಿದ ಬಿಡಿಎ ಅಂದಿನ ವಿಶೇಷ ಭೂ ಸ್ವಾಧೀನಾಧಿಕಾರಿ ಎಚ್.ಬಸವರಾಜೇಂದ್ರ, ಭೂ ಸ್ವಾಧೀನ ಉಪ ಆಯುಕ್ತರಾಗಿದ್ದ ಗೌರಿ ಶಂಕರ ಎಸ್.ಎನ್., ನಗರಾಭಿವೃದ್ಧಿ ಇಲಾಖೆಯ ಅಂದಿನ ಅಧೀನ ಕಾರ್ಯದರ್ಶಿ ಪ್ರೇಮಚಂದ್ರ, ಅಂದಿನ ಉಪಕಾರ್ಯದರ್ಶಿ ಬಸವರಾಜು, ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ಸುಭೀರ್ ಹರಿಸಿಂಗ್ ಸೇರಿ ಏಳು ಮಂದಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ ಹಾಗೂ ಐಪಿಸಿಯ ವಿವಿಧ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದೆ.
18 ದೂರುಗಳ ಪರಿಶೀಲನೆ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಹೆಸರಘಟ್ಟ – ಯಲಹಂಕ ವ್ಯಾಪ್ತಿಯಲ್ಲಿ ಶಿವರಾಮ
ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎ 3546 ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡಿತ್ತು. ಈ ಪೈಕಿ ಯಡಿಯೂರಪ್ಪ ಕಾನೂನು ಬಾಹಿರವಾಗಿ 257. 25 ಗುಂಟೆ ಎಕರೆ ಡಿನೋಟಿμಕೇಶನ್ ಮಾಡಿದ್ದಾರೆಂದು ಡಾ. ಡಿ.ಅಯ್ಯಪ್ಪ ಎಂಬುವವರು ಆರೋಪಿಸಿದ್ದರು. ಕಾನೂನು ಬಾಹಿರವಾಗಿ ಡಿನೋಟಿಫಿಕೇಶನ್ ಮಾಡಿರುವ ಸಂಬಂಧ ಒಟ್ಟು 20 ದೂರುಗಳು ದಾಖಲಾಗಿದ್ದು, ಈ ಪೈಕಿ ಎರಡಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಉಳಿದ 18 ದೂರುಗಳನ್ನೂ ಕೂಲಂಕಶವಾಗಿ ಪರಿಶೀಲಿಸುತ್ತಿದ್ದು ಬಿಎಸ್‌ವೈ ಅಧಿಕಾರ ದುರ್ಬಳಕೆ ಹಾಗೂ ನಿಯಬಾಹಿರವಾಗಿ ಡಿನೋಟಿಫಿಕೇಶನ್ ಮಾಡಿರುವ ಬಗ್ಗೆ ಲೋಪ ಕಂಡು ಬಂದರೆ ಎಫ್ ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಎಸಿಬಿ ಮೂಲಗಳು ತಿಳಿಸಿವೆ.